ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ನಾಳೆಯಿಂದಲೇ ನೇರಳೆ ಮಾರ್ಗದಲ್ಲಿ 6 ಹೆಚ್ಚುವರಿ ರೈಲುಗಳ ಸೇವೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಮೆಟ್ರೋ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದ್ದು, ನಾಳೆಯಿಂದಲೇ (ಜುಲೈ 06) ಬೆಂಗಳೂರಿನ ನೇರಳೆ ಮಾರ್ಗದಲ್ಲಿ ಹೆಚ್ಚುವರಿ ಮೆಟ್ರೋ (metro) ರೈಲು ಸೇವೆ ಆರಂಭಿಸಲಿದೆ.

ಈ ಕುರಿತಾಗಿ ಬಿಎಂಆರ್​ಸಿಎಲ್ (BMRCL)​ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ನೇರಳೆ ಮಾರ್ಗದಲ್ಲಿ ಪ್ರಸ್ತುತ 9 ರೈಲುಗಳಷ್ಟೇ ಕಾರ್ಯಾಚರಣೆ ಮಾಡುತ್ತಿದ್ದವು. ನಾಳೆಯಿಂದಲೇ ಜಾರಿಗೆ ಬರುವಂತೆ 6 ಹೆಚ್ಚುವರಿ ರೈಲುಗಳ ಸೇರ್ಪಡೆ ಮಾಡಲಾಗಿದೆ. ಹಾಗಾಗಿ ಜುಲೈ 6 ರಿಂದ ಒಟ್ಟು 15 ರೈಲುಗಳು ನೇರಳೆ ಮಾರ್ಗದಲ್ಲಿ ಕಾರ್ಯಾಚರಣೆ ನಿರ್ವಹಿಸಲಿವೆ.ಪ್ರಯಾಣಿಕರ ಉತ್ತಮ ಪ್ರತಿಕ್ರಿಯೆ ಹಾಗೂ ನಿರಂತರ ಪ್ರೋತ್ಸಾಹಕ್ಕಾಗಿ ಬಿಎಂ ಆರ್​ಸಿಎಲ್​ ಧನ್ಯವಾದ ತಿಳಿಸಿದೆ.

ಜುಲೈ 6 ರಿಂದ ಜಾರಿಗೆ ಬರುವಂತೆ ನೇರಳ ಮಾರ್ಗದಲ್ಲಿ ಮೆಟ್ರೋ ರೈಲುಗಳ ವೇಳಾಪಟ್ಟಿಯನ್ನು ಪರಿಷ್ಕರಿಸಿದ್ದು ನಾಡಪ್ರಭು ಕೆಂಪೇಗೌಡ ನಿಲ್ದಾಣ – ಮೆಜೆಸ್ಟಿಕ್‌ನಿಂದ ಹೆಚ್ಚುವರಿ ರೈಲು ಸೇವೆಗಳನ್ನು ಒದಗಿಸಲಾಗುತ್ತಿದೆ. ನಾಡಪ್ರಭು ಕೆಂಪೇಗೌಡ ನಿಲ್ಯಾಣ-ಮೆಜೆಸ್ಟಿಕ್‌ನಿಂದ ಪ್ರಸ್ತುತ 9 ರೈಲುಗಳ ಬದಲಾಗಿ ಹೆಚ್ಚುವರಿಯಾಗಿ 15 ರೈಲುಗಳನ್ನು ಪ್ರಯಾಣಿಕರ ಸೇವೆಗೆ ಒದಗಿಸಲಾಗುತ್ತಿದೆ. ಈ ಹದಿನೈದು ರೈಲುಗಳಲ್ಲಿ ಹತ್ತು ರೈಲುಗಳು ಪಟ್ಟಂದೂರು ಅಗ್ರಹಾರದ (ಐಟಿಪಿಎಲ್) ವರೆಗೆ, ನಾಲ್ಕು ರೈಲು ವೈಟ್‌ ಫೀಲ್ಡ್ ಮತ್ತು ಒಂದು ರೈಲು ಬೈಯಪ್ಪನಹಳ್ಳಿ ನಿಲ್ದಾಣದವರೆಗೆ ಸಂಚರಿಸಲಿವೆ.

ಬೆಳಗಿನ ಸಮಯದಲ್ಲಿ ರೈಲುಗಳು ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ 8.48, 8.58, 9.08, 9.18, 9.29, 9.39, 9.50, 10.00, 10.11, 10.21, 10.39, 10.50, 11.00, 11.22 ಪೂರ್ವಕ್ಕೆ ಹೊರಡುತ್ತವೆ. ಇದಲ್ಲದೆ, ನಾಡಪ್ರಭು ಕೆಂಪೇಗೌಡ ನಿಲ್ಯಾಣ-ಮೆಜೆಸ್ಟಿಕ್‌ನಲ್ಲಿ 3.3 ನಿಮಿಷಗಳಲ್ಲಿ ಬೆಳಿಗ್ಗೆ 10.25 ಗಂಟೆಯವರೆಗೆ ನಿಯಮಿತವಾಗಿ ಹಾದುಹೋಗುವ ರೈಲುಗಳು ಸಹ ಲಭ್ಯವಿರುತ್ತವೆ ಎಂದು ತಿಳಿಸಿದೆ.

ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ಪ್ರಸ್ತುತ ಗರುಡಾಚಾರ್ ಪಾಳ್ಯ ಮೆಟ್ರೋ ನಿಲ್ದಾಣದಲ್ಲಿ ಕೊನೆಗೊಳ್ಳುವ 14 ರೈಲುಗಳಲ್ಲಿ, 6 ರೈಲುಗಳನ್ನು ಪಟ್ಟಂದೂರು ಅಗ್ರಹಾರ (ಐಟಿಪಿಎಲ್) ವೈಟ್ ಫೀಲ್ಡ್ ವರೆಗೆ ವಿಸ್ತರಿಸಲಾಗಿದೆ. ಗರುಡಾಚಾರ್ ಪಾಳ್ಯ ಮೆಟ್ರೋ ನಿಲ್ದಾಣದಲ್ಲಿ ಇಳಿಯುವ ಪ್ರಯಾಣಿಕರಿಗೆ ಪಟ್ಟಂದೂರು ಅಗ್ರಹಾರ (ಐಟಿಪಿಎಲ್) ಕಡೆಗೆ ಪ್ರಯಾಣಿಸಲು ಮುಂದಿನ ರೈಲು 3.5 ನಿಮಿಷಗಳಿಗೊಮ್ಮೆ ಮೆಟ್ರೋ ಲಭ್ಯವಿರುತ್ತದೆ.

ಪ್ರಯಾಣಿಕರ ಅನುಕೂಲಕ್ಕಾಗಿ 5 ನಿಮಿಷಗಳ ಆವರ್ತನದಲ್ಲಿ ಬೈಯಪ್ಪನಹಳ್ಳಿಯಿಂದ ಸಂಜೆ 4:40 ರ ಬದಲಿಗೆ 4:20 ಕ್ಕೆ ಮೈಸೂರು ರಸ್ತೆ ನಿಲ್ದಾಣದ ಕಡೆಗೆ ಪ್ರಾರಂಭವಾಗಲಿದೆ. ಹಸಿರು ಮಾರ್ಗದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಸಾರ್ವಜನಿಕರು ತಮ್ಮ ಅನುಕೂಲಕರ ಪ್ರಯಾಣಕ್ಕಾಗಿ ಮೇಲಿನ ಬದಲಾವಣೆಯನ್ನು ಗಮನಿಸಿ ಪ್ರಯಾಣಿಸಲು ಕೋರಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!