ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್, ನಾಳೆ ಬೆಳಗ್ಗೆ 3:35ರಿಂದ ನಮ್ಮ ಮೆಟ್ರೋ ಸೇವೆ ಆರಂಭ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್ ಹಾಗೂ ಲೋಕಸಭೆ ಚುನಾವಣೆಗೆ ಮೆಟ್ರೋ ಸೇವೆಯನ್ನು ವಿಸ್ತರಿಸಿದ್ದ ಬಿಎಂಆರ್ ಸಿಎಲ್ ಇದೀಗ ಮತ್ತೆ ಮೆಟ್ರೋ ಸೇವೆಯನ್ನು ವಿಸ್ತರಿಸಿದೆ. ನಾಳೆ ಬೆಂಗಳೂರಿನ ಫೀಲ್ಡ್ ಮಾರ್ಷಲ್ ಸ್ಯಾಮ್ ಮಾಣೆಕ್ಷಾ ಪರೇಡ್ ಮೈದಾನದಲ್ಲಿ TCS ವರ್ಲ್ಡ್ 10K ರನ್‌ ಆಯೋಜಿಸಲಾಗಿದೆ.

ಬೆಳಗ್ಗೆ 7 ಗಂಟೆಯ ಸಮಯದಲ್ಲಿ ಬದಲಾವಣೆ ಮಾಡಿದೆ. ಟಿಸಿಎಸ್ ವರ್ಲ್ಡ್ 10ಕೆ ಓಟಕ್ಕೆ ಸಾರ್ವಜನಿಕರ ಪಾಲ್ಗೊಳ್ಳುವಿಕೆಗೆ ಅನುಕೂಲವಾಗುವಂತೆ ಮೆಟ್ರೋವನ್ನು ಬೆಳಗ್ಗೆ 7:00 ರ ಬದಲು ಬೆಳಗಿನ ಜಾವ 3:35 ಗಂಟೆಗೆ ಓಡಿಸಲು ನಿರ್ಧರಿಸಿದ್ದೇವೆ ಎಂದು ಸಾರ್ವಜನಿಕ ಸಂಪರ್ಕ ನಿರ್ದೇಶಕರು ತಿಳಿಸಿದ್ದಾರೆ.

ರಾಜ್ಯದಲ್ಲಿ ಮಾರ್ಚ್ 7 ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ರಾಜ್ಯಕ್ಕೆ ಆಗಮಿಸಿ ಮತ ಯಾಚನೆ ಆರಂಭಿಸಿದ್ದಾರೆ. ಮೇ 4 ರಂದು ಆರ್‌ಸಿಬಿ ಗುಜರಾತ್ ವಿರುದ್ಧವೂ ಆಡಲಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ. ಇದಕ್ಕೆ ಸಂಬಂಧಿಸಿದಂತೆ ಮೆಟ್ರೋ ತನ್ನ ವೇಳಾಪಟ್ಟಿಯನ್ನು ಬದಲಾಯಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!