February 8, 2026
Sunday, February 8, 2026
spot_img

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಟಿಕೆಟ್ ದರ ಏರಿಕೆ ಕೈಬಿಟ್ಟ BMRCL

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣದ ದರ ಏರಿಕೆ ಕುರಿತ ಗೊಂದಲ ಸದ್ಯ ಸುಖಾಂತ್ಯ ಕಂಡಿದ್ದು, ಕೇಂದ್ರ ಸರ್ಕಾರದ ಸೂಚನೆಯ ಮೇರೆಗೆ ಮೆಟ್ರೋ ಟಿಕೆಟ್ ಪ್ರಯಾಣದ ದರ ಏರಿಕೆಯನ್ನು ಬಿಎಂಆರ್​ಸಿಎಲ್​ ಕೈಬಿಟ್ಟಿದೆ.

ದರ ಏರಿಕೆ ಮಾಡದಂತೆ ಬಿಎಂಆರ್​ಸಿಎಲ್​ ಎಂಡಿಗೆ ಕೇಂದ್ರದಿಂದ ಇ-ಮೇಲ್ ರವಾನೆ ಬೆನ್ನಲ್ಲೇ​ ದರ ಏರಿಕೆಗೆ ಬ್ರೇಕ್ ಬಿದ್ದಿದೆ. ಮುಂದಿನ ಆದೇಶದವರೆಗೆ ದರ ಏರಿಕೆಗೆ ತಾತ್ಕಾಲಿಕ ಸ್ಥಗಿತವಾಗಿದೆ.

ಹಾಗಾಗಿ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ನಾಳೆಯಿಂದ ಮೆಟ್ರೋ ಟಿಕೆಟ್ ದರ ಏರಿಕೆ ಆಗೋದಿಲ್ಲ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !