ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೆಟ್ರೋ ನಿಲ್ದಾಣಗಳಲ್ಲಿ ವಾಹನ ಪಾರ್ಕ್ ಮಾಡಿ ಮೆಟ್ರೋ ಪ್ರಯಾಣ ಮಾಡುವವರಿಗೆ ಶೀಘ್ರದಲ್ಲೇ ಡಿಸ್ಕೌಂಟ್ ಸಿಗಲಿದೆ.
ಆಯಾ ಮೆಟ್ರೋ ನಿಲ್ದಾಣಗಳಲ್ಲಿ ಮಾಲ್ ಗಳಲ್ಲಿ ಇರುವಂತಹ ಮಲ್ಟಿ ಲೆವೆಲ್ ಪಾರ್ಕಿಂಗ್ ವ್ಯವಸ್ಥೆಯನ್ನು ಪ್ರಾರಂಭಿಸುವ ಬಿಎಂಆರ್ಸಿಎಲ್ ಚಿಂತನೆ ನಡೆಸಿದ್ದು, ಮೆಟ್ರೋ ನಿಲ್ದಾಣದಲ್ಲಿ ಪಾರ್ಕಿಂಗ್ ಮಾಡಿದ್ರೆ ಡಿಸ್ಕೌಂಟ್ ನೀಡಲಾಗುವುದು ಎಂಬ ಯೋಜನೆ ಜಾರಿಗೆ ತರಲಿದೆ.
ಸದ್ಯಕ್ಕೆ ಕೆಆರ್ ಪುರ ಮತ್ತು ಮೆಜೆಸ್ಟಿಕ್ ನಿಲ್ದಾಣಗಳಲ್ಲಿ ಈ ಯೋಜನೆಯನ್ನು ಪ್ರಾಯೋಗಿಕವಾಗಿ ಆರಂಭಿಸಲಾಗಿದ್ದು, ನಂತರ ಹಂತ ಹಂತವಾಗಿ ಇತರೆ ನಿಲ್ದಾಣಗಳಿಗೂ ವಿಸ್ತರಣೆ ಮಾಡಲು ಬಿಎಂಆರ್ಸಿಎಲ್ ಯೋಚಿಸಿದೆ.