ಮೆಟ್ರೋ ಪ್ರಯಾಣಿಕೆರಿಗೆ ಗುಡ್ ನ್ಯೂಸ್: ಪ್ರತಿ 15 ನಿಮಿಷಕ್ಕೊಮ್ಮೆ ಓಡಾಡಲಿದೆ ರೈಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನಮ್ಮ ಮೆಟ್ರೋ ರೈಲು ನಿಗಮದಿಂದ ಪ್ರಯಾಣಿಕರಿಗಾಗಿ ರೈಲುಗಳ ಸಮಯದ ಮಿತಿಯನ್ನು ಕಡಿಮೆ ಮಾಡಲಾಗಿದೆ. ಇದೀಗ 15 ನಿಮಿಷಕ್ಕೊಂದು ಮೆಟ್ರೋ ರೈಲುಗಳ ಸಂಚಾರ ಆರಂಭಗೊಳ್ಳಲಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬಿಎಂಆರ್ ಸಿಎಲ್ ( BMRCL ) ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 08-08-2022ರ ಸೋಮವಾರದಿಂದ ಬೆಳಿಗ್ಗೆ 5 ಗಂಟೆಯಿಂದ 6 ಗಂಟೆಯವರೆಗೆ ಮತ್ತು ರಾತ್ರಿ 10 ಗಂಟೆಯಿಂದ 11 ಗಂಟೆಯವರೆಗೆ ಈಗಿನ 20 ನಿಮಿಷಗಳ ಮಧ್ಯಂತರ ಬದಲಾಗಿ 15 ನಿಮಿಷಗಳ ಮಧ್ಯಂತರದಲ್ಲಿ ಪ್ರಯಾಣಿಕರ ಅನೂಕಲಕ್ಕಾಗಿ ಮೆಟ್ರೋ ರೈಲುಗಳು ಚಲಿಸಲಿವೆ ಎಂಬುದಾಗಿ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!