ಸಚಿವ ಸ್ಥಾನ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಶೀಘ್ರದಲ್ಲಿಯೇ ಆಗುತ್ತೆ ವಿಸ್ತರಣೆ ಎಂದ ಸಿಎಂ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಚರ್ಚೆ ಜೋರಾಗಿ ನಡೆಯಿತ್ತಿದ್ದು, ಶೀಘ್ರದಲ್ಲಿಯೇಆಗುವ ನಿರೀಕ್ಷೆಯಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಚುನಾವಣೆ ವೇಳೆ ಅತೃಪ್ತ ನಾಯಕರಿಂದ ಪಕ್ಷಕ್ಕೆ ಉಂಟಾಗುತ್ತಿದ್ದ ನಷ್ಟವನ್ನು ಸರಿದೂಗಿಸಲು ಹೈ ಕಮಾಂಡ್‌ ಸಚಿವ ಸಂಪುಟ ವಿಸ್ತರಣೆ ಕೈಗೊಂಡಿದೆ ಎಂದು ತಿಳಿದುಬಂದಿದೆ.
ಸಚಿವ ಸ್ಥಾನಕ್ಕಾಗಿ ಕೆ.ಎಸ್. ಈಶ್ವರಪ್ಪ, ರಮೇಶ್‌ ಜಾರಕಿಹೊಳಿ, ಸಿ.ಪಿ. ಯೋಗೀಶ್ವರ್‌ ಸೇರಿ ಹಲವರು ಪಟ್ಟು ಹಿಡಿದು ಕುಳಿತಿದ್ದಾರೆ. ನಾಲ್ಕೈದು ತಿಂಗಳಿಂದ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಬಹಿರಂಗವಾಗಿಯೇ ಸರ್ಕಾರದ ವಿರುದ್ಧ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದರು.

ಈ ಕುರಿತು ಮಾತನಾಡಿದ ಸಿಎಂ , ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ವರಿಷ್ಠರೊಂದಿಗೆ ವಿಸ್ತೃತವಾದ ಚರ್ಚೆ ಆಗಿದೆ. ನನಗೆ ಬಂದಿರುವ ಮಾಹಿತಿ ಪ್ರಕಾರ ಆದಷ್ಟೂ ಬೇಗನೆ ಒಂದು ಸಭೆ ನಡೆಸಿ ಈ ಬಗ್ಗೆ ತೀರ್ಮಾನವಾಗಲಿದೆ. ಶೀಘ್ರದಲ್ಲಿ ಆಗುವ ನಿರೀಕ್ಷೆ ಇದೆ. ಸಚಿವ ಸಂಪುಟಕ್ಕೆ ಯಾರೆಲ್ಲಾ ಸೇರ್ಪಡೆಯಾಗುತ್ತಾರೆ ಎನ್ನುವುದು ಹೈಕಮಾಂಡ್ ತೀರ್ಮಾನ ಮಾಡಲಿದೆ. ವಿಚಾರಗಳನ್ನು ವರಿಷ್ಠರಿಗೆ ಮನವರಿಕೆ ಮಾಡಲಾಗಿದೆ. ಸಾಮಾಜಿಕ, ಪ್ರಾದೇಶಿಕ ಪ್ರಾತಿನಿಧ್ಯ ಎಲ್ಲಾ ವಿಚಾರಗಳು ಇವುಗಳ ಬಗ್ಗೆ ಚರ್ಚೆಯಾಗಿದ್ದು ಶೀಘ್ರದಲ್ಲಿ ವಿಸ್ತರಣೆ ಆಗುವ ನಿರೀಕ್ಷೆಯಿದೆ ಎಂದು ಮಾಹಿತಿ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!