ಹೊಸ ದಿಗಂತ ಡಿಜಿಟಲ್ ಡೆಸ್ಕ್:
ನಟ ಮೋಹನ್‍ಲಾಲ್ ಅಭಿನಯದ ವೃಷಭ ಸಿನಿಮಾ ರಿಲೀಸ್ ಆಗಲು ಸಜ್ಜಾಗಿದ್ದು, ಅಭಿಮಾನಿ ಬಳಗಕ್ಕೆ ಗುಡ್‍ನ್ಯೂಸ್ ಸಿಕ್ಕಿದೆ. ಇದೇ ವರ್ಷ ನವೆಂಬರ್ 5ರಂದು ಸಿನಿಮಾ ತೆರೆಕಾಣಲು ಮುಹೂರ್ತ ಫಿಕ್ಸ್ ಮಾಡಿಕೊಂಡಿದೆ.
ಈಗಾಗಲೇ ವೃಷಭ ಸಿನಿಮಾ ಫಸ್ಟ್‌ಲುಕ್ ಪೋಸ್ಟರ್ ಹಾಗೂ ಟೀಸರ್‍ನಲ್ಲೇ ಚಿತ್ರ ರಸಿಕರ ಗಮನ ಸೆಳೆದಿದೆ. ನಂದಕಿಶೋರ್ ನಿರ್ದೇಶನದ ಈ ಸಿನಿಮಾದಲ್ಲಿ ಬಹುತಾರಾಗಣವಿದೆ. ಕನ್ನಡದ ತಾರೆಯರು ಈ ಸಿನಿಮಾದಲ್ಲಿ ನಟಿಸಿದ್ದಾರೆ.
ನಟಿ ರಾಗಿಣಿ ದ್ವಿವೇದಿ ಹಾಗೂ ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಲಂಕೇಶ್ ಈ ಸಿನಿಮಾದ ಪಾತ್ರವರ್ಗದಲ್ಲಿದ್ದಾರೆ.