ವಾಹನ ಸವಾರರಿಗೆ ಗುಡ್‌ನ್ಯೂಸ್: ಬೆಂಗಳೂರು- ಚೆನ್ನೈ ಎಕ್ಸ್‌ಪ್ರೆಸ್‌ ವೇ ಸಂಚಾರ ಮುಕ್ತ!

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಚೆನ್ನೈ – ಬೆಂಗಳೂರು ಎಕ್ಸ್‌ಪ್ರೆಸ್‌ ವೇ ಸಂಚಾರಕ್ಕೆ ಮುಕ್ತವಾಗಿದೆ. ಮೂರು ರಾಜ್ಯಗಳನ್ನ ಒಳಗೊಂಡ ಎಕ್ಸ್‌ಪ್ರೆಸ್‌ ವೇ ಮಾರ್ಗ ಇದಾಗಿದೆ.

ಕರ್ನಾಟಕ ರಾಜ್ಯ ಭಾಗದ 71 ಕಿಲೋ ಮೀಟರ್ ಮಾರ್ಗದ ಕಾಮಗಾರಿ ಸಂಪೂರ್ಣ ಮುಕ್ತಾಯವಾಗಿದೆ. ಮಾರ್ಗಸೂಚಿ ಫಲಕಗಳು, ನಾಮಫಲಕಗಳು, ಡಿಜಿಟಲ್ ಫಲಕಗಳು ಸೇರಿದಂತೆ ಕೆಲಸಗಳು ಮುಗಿದಿದ್ದು, ತಾತ್ಕಾಲಿಕವಾಗಿ ಟೋಲ್ ಇಲ್ಲದೆ ಸಂಚಾರಕ್ಕೆ ಅವಕಾಶ ನೀಡಲಾಗಿದೆ.

ಹೊಸಕೋಟೆಯ ಇಂಟರ್ ಚೇಂಜ್‌ನಿಂದ ಚೆನ್ನೈವರೆಗೆ 280 ಕಿ.ಮೀ ಉದ್ದದ ಎಕ್ಸ್‌ಪ್ರೆಸ್ ವೇ ಇದಾಗಿದೆ. ಸದ್ಯ ಹೊಸಕೋಟೆ ಸ್ಯಾಟ್‌ಲೈಟ್ ರಿಂಗ್ ರಸ್ತೆಯಿಂದ ಆಂಧ್ರ ಗಡಿ ಸುಂದರಪಾಳ್ಯವರೆಗೆ ಸಂಚಾರಕ್ಕೆ ರಸ್ತೆ ರೆಡಿಯಾಗಿದೆ. ವೇಗದ ಮಿತಿ 100 ಕಿ.ಮೀಗೆ ಸೀಮಿತಗೊಳಿಸಲಾಗಿದೆ.

ಆಂಧ್ರಪ್ರದೇಶ, ತಮಿಳುನಾಡು ಭಾಗದಲ್ಲಿ ಎಕ್ಸ್‌ಪ್ರೆಸ್‌ ಹೈವೇ ಕಾಮಗಾರಿ ಇನ್ನೂ ಮುಂದುವರೆದಿದೆ. ಈ ವರ್ಷಾಂತ್ಯಕ್ಕೆ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ಹೈವೇ ಸಂಚಾರಕ್ಕೆ ಸಂಪೂರ್ಣ ಮುಕ್ತವಾಗುವ ಸಾಧ್ಯತೆ ಇದೆ. ಸಂಪೂರ್ಣ ಕಾಮಗಾರಿ ಮುಕ್ತಾಯಗೊಂಡು ಅಧಿಕೃತ ಉದ್ಘಾಟನೆ ಬಳಿಕ ಟೋಲ್ ಸಂಗ್ರಹ ಆರಂಭಿಸಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪ್ರದೇಶಿಕ ಅಧಿಕಾರಿ ವಿಲಾಸ್ ಪಿ.ಬ್ರಹ್ಮಂಕರ್ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಮಾಲೂರು, ಬಂಗಾರಪೇಟೆ ಮತ್ತು ಆಂಧ್ರ ಗಡಿ ಸುಂದರ ಪಾಳ್ಯದಲ್ಲಿ ಮೂರು ಇಂಟರ್ ಚೇಂಜ್‌ಗಳಿವೆ. ಸಂಪೂರ್ಣ ಕಾಮಗಾರಿ‌ ಮುಕ್ತಾಯದ ಬಳಿಕ ಟೋಲ್ ಸಂಗ್ರಹ ಆರಂಭವಾಗುವ ಸಾಧ್ಯತೆ ಇದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!