ಇಂದಿನ ಬಜೆಟ್‌ನಲ್ಲಿ ವಾಹನ ಸವಾರರಿಗೆ ಸಿಗುತ್ತಾ ಗುಡ್‌ನ್ಯೂಸ್?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಡಿಸೇಲ್ ಹಾಗೂ ಪೆಟ್ರೋಲ್ ಬೆಲೆಯಲ್ಲಿ ಏರಿಕೆಯಾದರೆ ದಿನ ಬಳಕೆಯ ಎಲ್ಲಾ ವಸ್ತುಗಳ ಮೇಲೆ ಕ್ರಮೇಣ ಇದರ ಪರಿಣಾಮ ಬೀರುತ್ತದೆ. ಸರಕುಗಳ ಸಾಗಣೆಗೆ ಪೆಟ್ರೋಲ್ ಡಿಸೇಲ್‌ ಅಗತ್ಯವಾಗಿರುವುದರಿಂದ ಎಲ್ಲಾ ವಸ್ತುಗಳ ಬೆಲೆ ಗಗನಕ್ಕೇರುತ್ತದೆ. ಹಾಗಾಗಿ ಇಂದಿನ ಕೇಂದ್ರ ಬಜೆಟ್‌ನಲ್ಲಿ ವಾಹನ ಸವಾರರು ಪೆಟ್ರೋಲ್‌, ಡಿಸೇಲ್‌ ಬೆಲೆ ಕಡಿಮೆಯಾಗುತ್ತದಾ ಎಂದು ಕಾದುನೋಡುತ್ತಿದ್ದಾರೆ.

ಕಚ್ಚಾ ತೈಲ ದರ ಏರುತ್ತಿರುವುದನ್ನು ಗಮನಿಸಿದರೆ ಮತ್ತೆ ದೇಶದ ಎಲ್ಲ ಕಡೆ ಇಂಧನ ದರ ಮತ್ತಷ್ಟು ದುಬಾರಿಯಾಗುತ್ತದಾ ಎಂಬ ಆತಂಕವೂ ಮೂಡುತ್ತದೆ. ಪೆಟ್ರೋಲ್ ಹಾಗೂ ಡಿಸೇಲ್ ದರಗಳು ಪ್ರತಿ ತಿಂಗಳ 1 ರಿಂದ 16ರ ನಡುವೆ ಬದಲಾಗುತ್ತಿತ್ತು. ಆದ್ರೆ ಕಳೆದ ಎರಡು ದಿನಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸ್ಥಿರವಾಗಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!