ಹೊಸದಿಗಂತ ಡಿಜಿಟಲ್ ಡೆಸ್ಕ್:
ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಾಗುವ ಸಾಧ್ಯತೆ ಇದೆ. ಈ ಬಗ್ಗೆ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಕಾರ್ಯದರ್ಶಿ ಪಂಕಜ್ ಜೈನ್ ವಿಷಯವನ್ನು ಪ್ರಕಟಿಸಿದ್ದಾರೆ.
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಇನ್ನೂ ಹೆಚ್ಚು ಕಾಲ ಇಳಿಕೆಯಾದರೆ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕೂಡ ಕುಸಿಯುವ ಸಾಧ್ಯತೆ ಇದೆ. ಕಚ್ಚಾ ತೈಲ ಬೆಲೆಗಳು ದೀರ್ಘಾವಧಿಯವರೆಗೆ ಕಡಿಮೆಯಾದರೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿಮೆ ಮಾಡಲು ಪರಿಗಣಿಸಬಹುದು ಎಂದು ತೈಲ ಕಂಪನಿಗಳು ತಿಳಿಸಿವೆ.
ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಪ್ರಾಸಂಗಿಕ ತೆರಿಗೆಯನ್ನು ತೆಗೆದುಹಾಕುವ ಬಗ್ಗೆ ಸರ್ಕಾರ ಯೋಚಿಸುತ್ತಿದೆ ಮತ್ತು ಪೆಟ್ರೋಲಿಯಂ ಸಚಿವಾಲಯ ಮತ್ತು ಹಣಕಾಸು ಸಚಿವಾಲಯದೊಂದಿಗೆ ಚರ್ಚೆ ನಡೆಸಿದೆ ಎಂದು ಅವರು ಹೇಳಿದರು.
ಕಚ್ಚಾ ತೈಲ ಬೆಲೆಗಳು ಇತ್ತೀಚೆಗೆ ಮೂರು ವರ್ಷಗಳಲ್ಲಿ ಕಡಿಮೆ ಮಟ್ಟಕ್ಕೆ ಕುಸಿದವು, ಇದು ಇಂಧನ ಕಂಪನಿಗಳಿಗೆ ಲಾಭದಾಯಕತೆಯನ್ನು ಹೆಚ್ಚಿಸುತ್ತದೆ. ಮಹಾರಾಷ್ಟ್ರ ಮತ್ತು ಹರಿಯಾಣದಂತಹ ಪ್ರಮುಖ ರಾಜ್ಯಗಳಲ್ಲಿ ಸಾರ್ವತ್ರಿಕ ಚುನಾವಣೆಗೆ ಮುನ್ನ ಇಂಧನ ಬೆಲೆ ಕುಸಿಯಬಹುದು ಎಂಬ ಮಾತು ಕೇಳಿಬರುತ್ತಿದೆ.