Friday, September 12, 2025

ಸಿನಿ ಪ್ರಿಯರಿಗೆ ಸಿಹಿಸುದ್ದಿ: ಚಿತ್ರಮಂದಿರಗಳಲ್ಲಿ ಏಕರೂಪದ ದರ ಜಾರಿಗೊಳಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಸಿನಿ ಪ್ರಿಯರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಇಂದಿನಿಂದ ಚಿತ್ರಮಂದಿರಗಳಲ್ಲಿ 200 ರೂ.ಟಿಕೆಟ್ ಗೆ ಅನುಮೋದನೆ ನೀಡಿದೆ. ಈ ಕುರಿತು ಸರ್ಕಾರ ಅಧಿಕೃತ ಆದೇಶ ಕೂಡ ಹೊರಡಿಸಿದೆ.

ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಮಾಡಿದ್ದು, ರಾಜ್ಯದಲ್ಲಿರುವ ಎಲ್ಲಾ ಮಲ್ಟಿಫ್ಲೆಕ್ಸ್ ಗಳು ಸೇರಿದಂತೆ ಎಲ್ಲಾ ಚಿತ್ರಮಂದಿರಗಳಲ್ಲಿ ಏಕರೂಪದ ದರ ಜಾರಿಗೊಳಿಸಿ ಆದೇಶಿಸಿದೆ. ಎಲ್ಲಾ ಚಿತ್ರಮಂದಿರಗಳಲ್ಲಿ ಏಕರೂಪದ ದರ ಜಾರಿಗೊಳಿಸಲಾಗಿದೆ. ರೂ.200 ಮೀರದಂತೆ ಆದೇಶ ಹೊರಡಿಸಿದೆ. ಎಲ್ಲಾ ಭಾಷೆಯ ಸಿನಿಮಾಗಳಿಗೂ ಏಕರೂಪದ ದರವನ್ನು ಜಾರಿಗೊಳಿಸಲಾಗಿದೆ.

ಇದನ್ನೂ ಓದಿ