ಪಾಕ್, ಬಾಂಗ್ಲಾ ಅಫ್ಘಾನ್ ನಿರಾಶ್ರಿತರಿಗೆ ಗುಡ್ ನ್ಯೂಸ್: ಸಿಎಎ ನಿಯಮ ಸಡಿಲಿಸಿದ ಮೋದಿ ಸರಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್; 

ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ಹಲ್ಲೆ, ಹತ್ಯೆ, ದೇವಾಲಯಗಳ ಮೇಲೆ ದಾಳಿಗಳು ನಡೆಯುತ್ತಿವೆ.ಇದರ ಬೆನ್ನಲ್ಲೇ, ಕೇಂದ್ರ ಸರ್ಕಾರವು ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನದ ಮುಸ್ಲಿಮೇತರ ಅಲ್ಪಸಂಖ್ಯಾತರಿಗೆ ಭಾರತದ ಪೌರತ್ವ ನೀಡುವ ಪೌರತ್ವ ತಿದ್ದುಪಡಿ ಕಾಯ್ದೆಯ (CAA) ನಿಯಮದಲ್ಲಿ ಬದಲಾವಣೆ ತಂದಿದೆ.

ಕೇಂದ್ರ ಸರ್ಕಾರ ಭಾರತದ ಪೌರತ್ವ ಪಡೆಯಲು ನಿರಾಶ್ರಿತ ಅಲ್ಪಸಂಖ್ಯಾತರು ಇನ್ನು ಮುಂದೆ ಪೌರತ್ವ ಪಡೆಯುವ ರೀತಿಯಲ್ಲಿ ಸಿಎಎ ಕಾಯ್ದೆಯ ಪರಿಚ್ಛೇದ 1 ಎ ನಿಯಮಗಳನ್ನು ಬದಲಿಸಿದೆ. ಇದರಿಂದ ನಿರಾಶ್ರಿತರು ಕೇಂದ್ರ ಸರ್ಕಾರ, ಯಾವುದೇ ರಾಜ್ಯ ಸರ್ಕಾರ ಅಥವಾ ನ್ಯಾಯಾಂಗ ನೀಡುವ ದಾಖಲೆ, ಭೂಮಿಯ ದಾಖಲೆ ನೀಡಿದರೂ ಸಾಕು, ಭಾರತದ ಪೌರತ್ವವನ್ನು ಪಡೆಯಬಹುದಾಗಿದೆ. ಇದರ ಜತೆಗೆ ನಿರಾಶ್ರಿತರ ಅಜ್ಜ-ಅಜ್ಜಿ, ಮುತ್ತಜ್ಜ-ಮುತ್ತಜ್ಜಿಯು ಬಾಂಗ್ಲಾ, ಪಾಕ್‌ ಹಾಗೂ ಅಫ್ಘಾನಿಸ್ತಾನದ ನಿವಾಸಿಗಳು ಎಂಬುದರ ಯಾವುದೇ ದಾಖಲೆ ನೀಡಿದರೂ ಭಾರತದ ಪೌರತ್ವ ಪಡೆಯಬಹುದಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

2014 ರ ಡಿಸೆಂಬರ್ 31 ಕ್ಕಿಂತ ಮೊದಲು ನೆರೆಯ ಮುಸ್ಲಿಂ ಬಹುಸಂಖ್ಯಾತ ದೇಶಗಳಾದ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ವಲಸೆ ಬಂದ ಹಿಂದುಗಳು, ಸಿಖ್ಖರು, ಕ್ರಿಶ್ಚಿಯನ್ನರು, ಬೌದ್ಧರು, ಜೈನರು ಮತ್ತು ಪಾರ್ಸಿಗಳಿಗೆ ಭಾರತೀಯ ಪೌರತ್ವಕ್ಕೆ ಮಾರ್ಗವನ್ನು ಒದಗಿಸಲು ಸಿಎಎ 1955 ರ ಪೌರತ್ವ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ.

ಕಾಯ್ದೆಯ 2019ರ ತಿದ್ದುಪಡಿಯ ಪ್ರಕಾರ ಡಿಸೆಂಬರ್ 31, 2014 ರವರೆಗೆ ಭಾರತಕ್ಕೆ ಪ್ರವೇಶಿಸಿದ ಮತ್ತು ತಮ್ಮ ಮೂಲ ದೇಶದಲ್ಲಿ ಧಾರ್ಮಿಕ ಕಿರುಕುಳ ಅಥವಾ ಭಯ ಅಥವಾ ಧಾರ್ಮಿಕ ಕಿರುಕುಳ ಅನುಭವಿಸಿದ ವಲಸಿಗರಿಗೆ ಭಾರತೀಯ ಪೌರತ್ವ ಲಭಿಸುತ್ತದೆ.ಸಿಎಎಗೆ 2019 ರ ತಿದ್ದುಪಡಿ ಮೂಲಕ ಮೇಲೆ ಹೇಳಿರುವ ದೇಶಗಳ ಮುಸ್ಲಿಮೇತರ ವಲಸಿಗರಿಗೆ ಪೌರತ್ವ ನೀಡುವ ಕಾಯುವಿಕೆಯ ಹನ್ನೆರಡು ವರ್ಷಗಳನ್ನು ಕೇವಲ ಆರು ವರ್ಷಗಳಿಗೆ ಇಳಿಸಲಾಗಿದೆ. ಸಿಎಎ ಕುರಿತ ಗುಪ್ತಚರ ಬ್ಯೂರೋ ವರದಿಯ ಪ್ರಕಾರ, ಕಾಯ್ದೆಯ ನಿಯಮಗಳು ಪ್ರಕಟಗೊಂಡ ತಕ್ಷಣವೇ 30,000 ಕ್ಕೂ ಹೆಚ್ಚು ಫಲಾನುಭವಿಗಳು (ವಲಸಿಗರು) ಇದರ ಲಾಭವನ್ನು ಪಡೆಯುತ್ತಾರೆ. ಈಗಾಗಲೇ ಹಲವು ನಿರಾಶ್ರಿತರಿಗೆ ಕೇಂದ್ರ ಸರ್ಕಾರವು ಪೌರತ್ವ ನೀಡಿದೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!