ಪೋಷಕರಿಗೆ ಗುಡ್‌ ನ್ಯೂಸ್‌; 1ನೇ ತರಗತಿ ಮಕ್ಕಳ ದಾಖಲಾತಿ ವಯೋಮಿತಿ ಗೊಂದಲಕ್ಕೆ ತೆರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಇನ್ಮುಂದೆ ಆರು ವರ್ಷ ಅಲ್ಲ, ಐದು ವರ್ಷ ಐದು ತಿಂಗಳಾದ ಮಕ್ಕಳನ್ನು ಒಂದನೇ ತರಗತಿಗೆ ಸೇರಿಸಬಹುದಾಗಿದೆ.  ಒಂದನೇ ತರಗತಿಗೆ ಪ್ರವೇಶ ಪಡೆಯುವ ಮಕ್ಕಳ ವಯೋಮಿತಿ ಸಡಿಲಗೊಳಿಸುವ ಕುರಿತ ಶಿಫಾರಸು ಒಳಗೊಂಡ ತಾತ್ಕಾಲಿಕ ವರದಿಯನ್ನು ರಾಜ್ಯ ಶಿಕ್ಷಣ ನೀತಿ ಆಯೋಗ ಸಲ್ಲಿಸಿದ್ದು, ಈ ಕುರಿತು ಶಾಲಾ ಶಿಕ್ಷಣ ಇಲಾಖೆ ನಿರ್ಧಾರ ಪ್ರಕಟಿಸಿದೆ.

ಅದರ ಪ್ರಕಾರ 5 ವರ್ಷ 5 ತಿಂಗಳಾಗಿರುವ ಮಕ್ಕಳಿಗೆ ಇನ್ನು 1 ನೇ ತರಗತಿಗೆ ದಾಖಲಾತಿ ಮಾಡಲು ಸಾಧ್ಯವಾಗಲಿದೆ. ಇದಕ್ಕೂ ಮುನ್ನ ರಾಜ್ಯ ಪಠ್ಯಕ್ರಮದಲ್ಲಿ 1ನೇ ತರಗತಿಗೆ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳಲು 6 ವರ್ಷ ಆಗಿರಬೇಕಾಗಿರುವುದು ಕಡ್ಡಾಯವಾಗಿತ್ತು.

ಎಲ್​ಕೆಜಿ, ಯುಕೆಜಿ ಆಗಿದ್ದರೆ ಮಾತ್ರ ಒಂದನೇ ತರಗತಿಗೆ ಪ್ರವೇಶ. ಮಕ್ಕಳಿಗೆ 5 ವರ್ಷ 5 ತಿಂಗಳಾಗಿರಬೇಕು. ಪೋಷಕರ ಒತ್ತಾಯದ ಮೇರೆಗೆ ಇದೊಂದು ವರ್ಷ ಮಾತ್ರ ಅವಕಾಶ. ಮುಂದಿನ ಶೈಕ್ಷಣಿಕ ವರ್ಷದಿಂದ ಕಡ್ಡಾಯವಾಗಿ 6 ವರ್ಷ ಆಗಿರಬೇಕು ಎಂದು ಮಧು ಬಂಗಾರಪ್ಪ ಸ್ಪಷ್ಟಪಡಿಸಿದರು.

ಶಾಲಾ ಶಿಕ್ಷಣ ಇಲಾಖೆ 2022ರ ನವೆಂಬರ್‌ನಲ್ಲಿ ಹೊರಡಿಸಿದ ಆದೇಶದ ಪ್ರಕಾರ, ಜೂನ್ 1, 2025ರ ಒಳಗೆ ಆರು ವರ್ಷಗಳನ್ನು ಪೂರ್ಣಗೊಳಿಸಿದ ಮಕ್ಕಳು 2025-26 ಶೈಕ್ಷಣಿಕ ವರ್ಷಕ್ಕೆ ಒಂದನೇ ತರಗತಿಗೆ ಪ್ರವೇಶ ಪಡೆಯಲು ಅರ್ಹರಾಗಿರುತ್ತಾರೆ. ಇದರಿಂದ ಸಾವಿರಾರು ಮಕ್ಕಳ ಪ್ರವೇಶಕ್ಕೆ ಅಡ್ಡಿಯಾಗಿದೆ. ಮೊದಲು ಇದ್ದಂತೆ ಪೋಷಕರ ಇಚ್ಛೆಗೆ ಅನುಗುಣವಾಗಿ ಶಾಲೆಗೆ ಸೇರಿಸಲು ವಯೋಮಿತಿ ಸಡಿಲಿಕೆಯ ಅವಕಾಶ ನೀಡಬೇಕು ಎಂದು ಹಲವು ಪೋಷಕರು ಮನವಿ ಮಾಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!