September 28, 2026
Monday, September 28, 2026
spot_img

ಪವಿತ್ರಾ ಗೌಡಗೆ ಗುಡ್ ನ್ಯೂಸ್: ಬೇರೆ ಬ್ಯಾರಕ್‌ಗೆ ಶಿಫ್ಟ್ ಮಾಡಲು ಹೈಕೋರ್ಟ್ ಅಸ್ತು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಎ1 ಆರೋಪಿ ಪವಿತ್ರಾ ಗೌಡಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ.

ಹೌದು! ಪರಪ್ಪನ ಅಗ್ರಹಾರ ಜೈಲಿನ ಬ್ಯಾರಕ್‌ನಲ್ಲಿ ಎದುರಾಗುತ್ತಿರುವ ಸಮಸ್ಯೆಗಳ ಕುರಿತು ಪವಿತ್ರ ಸಲ್ಲಿಸಿದ್ದ ಅರ್ಜಿಗೆ 59ನೇ ಸೆಷನ್ಸ್ ಕೋರ್ಟ್ ಮಹತ್ವದ ಸೂಚನೆ ನೀಡಿದ್ದು, ಅರೋಗ್ಯ ಸಮಸ್ಯೆ ಎದುರಾದರೆ ಅವರನ್ನು ಬೇರೆ ಬ್ಯಾರಕ್‌ಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳುವಂತೆ ಆದೇಶ ನೀಡಿದೆ.

ಬ್ಯಾರಕ್‌ನಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಜನ ಇದ್ದಾರೆ

ಸಾಮಾನ್ಯ ಮಹಿಳಾ ಕೈದಿಗಳಿರುವ ಬ್ಯಾರಕ್‌ನಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಜನರನ್ನು ಇರಿಸಲಾಗಿದೆ. ಸುಮಾರು 20 ಕೈದಿಗಳಿಗೆ ಅವಕಾಶವಿರುವ ಸ್ಥಳದಲ್ಲಿ 30 ಮಂದಿಯನ್ನು ಇರಿಸಲಾಗಿದೆ ಎಂದು ಪವಿತ್ರಾ ಗೌಡ ಪರ ವಕೀಲರು ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯಲ್ಲಿ ತಿಳಿಸಿದ್ದರು.

ಇದನ್ನೂ ಓದಿ:

ರಾತ್ರಿ ಸರಿಯಾಗಿ ಮಲಗೋಕೆ ಆಗ್ತಿಲ್ಲ

ಖೈದಿಗಳ ಸಂಖ್ಯೆ ಹೆಚ್ಚಿರೋದ್ರಿಂದ ರಾತ್ರಿ ಮಲಗೋದಕ್ಕೆ ಆಗುತ್ತಿಲ್ಲ, ಇದ್ರಿಂದ ತಲೆನೋವು, ವಿಶ್ರಾಂತಿಯ ಕೊರತೆ ಹಾಗೂ ಆರೋಗ್ಯದ ಸಮಸ್ಯೆಗಳು ಶುರುವಾಗಿದೆ ಎಂದಿದ್ದಾರೆ. ಜತೆಗೆ ನಿರಂತರವಾಗಿ ನಿದ್ರೆ ಇಲ್ಲದಿರೋ ಕಾರಣ ಮಾನಸಿಕ ಒತ್ತಡ ಹಾಗೂ ಉದ್ವೇಗ ಎದುರಾಗುತ್ತಿದೆ ಎಂದು ಹೇಳಿದ್ದಾರೆ.

ಈ ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಾಲಯ ಪವಿತ್ರಾ ಗೌಡ ಅವರ ಆರೋಗ್ಯದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಬೇಕಿದ್ದರೆ ಬೇರೆ ಬ್ಯಾರಕ್ ಗೆ ಶಿಫ್ಟ್ ಮಾಡಬಹುದು ಎಂದು ತೀರ್ಪು ನೀಡಿದೆ.

Must Read