ಹೊಸದಿಗಂತ ಡಿಜಿಟಲ್ ಡೆಸ್ಕ್:
545 PSI ಹುದ್ದೆಗಳಿಗೆ ಡಿಸೆಂಬರ್ 23ಕ್ಕೆ ನಿಗದಿಯಾಗಿದ್ದ ಮರು ಪರೀಕ್ಷೆಯನ್ನು ಒಂದು ತಿಂಗಳ ಕಾಲ ಮುಂದೂಡಲಾಗಿ.
ಈ ಕುರಿತು ಚಬೆಳಗಾವಿಯ ಸುವರ್ಣಸೌಧದಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಘೋಷಿಸಿದರು. ಮರು ಪರೀಕ್ಷೆಯನ್ನು ಮುಂದೂಡುವಂತೆ ಆಡಳಿತ ಮತ್ತು ವಿಪಕ್ಷಗಳ ಸದಸ್ಯರು ಆಗ್ರಹಿಸಿದ ಹಿನ್ನೆಲೆಯಲ್ಲಿ ಡಿ.23ರಿಂದ ಜ. 23ಕ್ಕೆ ಮುಂದೂಡಿರುವುದಾಗಿ ಪರಮೇಶ್ವರ್ ಮಾಹಿತಿ ನೀಡಿದರು.
ಪೊಲೀಸ್ ನೇಮಕಾತಿಯಲ್ಲಿನ ಅಕ್ರಮ ಬೆಳಕಿಗೆ ಬಂದ ಬಳಿಕ ಇಡೀ ನೇಮಕಾತಿಯೇ ರದ್ದಾಗಿತ್ತು. ಮರು ಪರೀಕ್ಷೆ ನಡೆಸಬೇಕೆಂಬ ಸರ್ಕಾರದ ಕೂಗಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿತು. ಇದರ ಬೆನ್ನಲ್ಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮರು ಪರೀಕ್ಷಾ ದಿನಾಂಕವನ್ನು ನ.22ರಂದು ಪ್ರಕಟಿಸಿ, ಡಿ.23ಕ್ಕೆ ನಿಗದಿ ಮಾಡಿತ್ತು, ಆದರೆ, ಅನೇಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೆ, ದಿನಾಂಕ ಮುಂದೂಡಬೇಕೆಂಬ ಕೂಗುಗಳು ಕೇಳಿಬಂದಿದ್ದವು. ಇಂದು ಸದನದಲ್ಲೂ ಇದೇ ಆಗ್ರಹಗಳು ಕೇಳಿಬಂದ ಹಿನ್ನೆಲೆಯಲ್ಲಿ ಗೃಹ ಸಚಿವ ಪರಮೇಶ್ವರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಜ. 23ಕ್ಕೆ 545 PSI ಹುದ್ದೆಗಳ ಮರು ಪರೀಕ್ಷೆಯನ್ನು ಮುಂದೂಡಿದ್ದಾರೆ.