ಪಿಯು ವಿದ್ಯಾರ್ಥಿನಿಯರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್: ಶುಲ್ಕ ವಿನಾಯಿತಿ ನೀಡಿ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯ ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿಯರಿಗೆಸರ್ಕಾರ ಗುಡ್ ನ್ಯೂಸ್ ನೀಡಿದ್ದು, . ಶುಲ್ಕ ಪಾವತಿಗೆ ಕೊಂಚ ವಿನಾಯಿತಿ ನೀಡಿ ಆದೇಶ ಹೊರಡಿಸಿದೆ.
ಸರ್ಕಾರಿ ಪಿಯು ಕಾಲೇಜುಗಳಿಗೆ ದಾಖಲಾಗುವ ವಿದ್ಯಾರ್ಥಿನಿಯರಿಗೆ 456 ರೂಪಾಯಿ ಶುಲ್ಕ ವಿನಾಯಿತಿ ನೀಡಿ, ಸದರಿ ಮೊತ್ತವನ್ನು ಪ್ರಾಂಶುಪಾಲರ ಖಾತೆಗೆ ಜಮೆ ಮಾಡುವಂತೆ ಆದೇಶ ಹೊರಡಿಸಲಾಗಿದೆ.
ಈ ಕುರಿತು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದು, ಕಳೆದ ಎರಡು ವರ್ಷ ಆಯಾ ವರ್ಷಗಳಿಗೆ ಮಾತ್ರ ಸೀಮಿತವಾಗಿದ್ದ ಶುಲ್ಕದಿಂದ ವಿನಾಯಿತಿಯನ್ನು 2022-23ನೇ ಶೈಕ್ಷಣಿಕ ಸಾಲಿನಿಂದ ಶಾಶ್ವತವಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ಸಮಯದಲ್ಲಿ ವಿದ್ಯಾರ್ಥಿನಿಯರಿಗೆ 456 ರೂ. ಶುಲ್ಕದಿಂದ ಸಂಪೂರ್ಣ ವಿನಾಯಿತಿ ನೀಡಲಾಗುತ್ತದೆ.
ಶುಲ್ಕ ಮರುಪಾವತಿಗಾಗಿ ಲೆಕ್ಕಶೀರ್ಷಿಕೆ ಉಪಶೀರ್ಷಿಕೆ 103ರ ಅಡಿಯಲ್ಲಿ ಒದಗಿಸುವ ಅನುದಾನವನ್ನು ಸಂಬಂಧಿಸಿದ ಪ್ರಾಂಶುಪಾಲರ ಖಾತೆಗೆ ಖಜಾನೆ-2ರ ತಂತ್ರಾಂಶದ ಮೂಲಕ ಬಿಡುಗಡೆಗೊಳಿಸಲು ಅಗತ್ಯಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!