ಹೊಸದಿಗಂತ ಡಿಜಿಟಲ್ ಡೆಸ್ಕ್:
ರೈಲ್ವೆ ಪ್ರಯಾಣಿಕರು ರೈಲ್ವೆ ನಿಲ್ದಾಣಕ್ಕೆ ತೆರಳಿ ಬುಕ್ಕಿಂಗ್ ಮಾಡಿದ ಟಿಕೆಟ್‌ಗಳನ್ನು ಐಆರ್‌ಸಿಟಿಸಿ ವೆಬ್‌ಸೈಟ್ ಅಥವಾ 139ಗೆ ಕರೆ ಮಾಡುವ ಮೂಲಕ ಆನ್‌ಲೈನ್‌ನಲ್ಲಿ ಟಿಕೆಟ್‌ಗಳನ್ನು ಕ್ಯಾನ್ಸಲ್ ಮಾಡಿಸಿಕೊಳ್ಳಬಹುದು ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಬಿಜೆಪಿ ಸಂಸದೆ ಮೇಧಾ ವಿಶ್ರಾಮ್ ಕುಲಕರ್ಣಿ ಈ ವಿಷಯದ ಕುರಿತು ಪ್ರಶ್ನೆ ಮಾಡಿದ್ದರು. ಇದಕ್ಕೆ ರಾಜ್ಯಸಭೆಯಲ್ಲಿ ಲಿಖಿತ ಉತ್ತರ ನೀಡಿದ ಅಶ್ವಿನಿ ವೈಷ್ಣವ್, ರೈಲ್ವೆ ಪ್ರಯಾಣಿಕರ ನಿಯಮಗಳು 2015 ರಲ್ಲಿ ನಿಗದಿಪಡಿಸಿದ ಸಮಯದ ಮಿತಿಯ ಪ್ರಕಾರ, ಮೂಲ PRS ಕೌಂಟರ್ ಟಿಕೆಟ್ ಅನ್ನು ಸರೆಂಡರ್ ಮಾಡಿದ ನಂತರ ಕಾಯ್ದಿರಿಸುವಿಕೆ ಕೌಂಟರ್‌ನಲ್ಲಿ ಕಾಯ್ದಿರಿಸುವಿಕೆ ಪಟ್ಟಿಯಲ್ಲಿರುವ PRS ಕೌಂಟರ್ ಟಿಕೆಟ್ ಅನ್ನು ರದ್ದುಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ.