October 10, 2026
Saturday, October 10, 2026
spot_img

ರಾಮ್ ಚರಣ್ ಅಭಿಮಾನಿಗಳಿಗೆ ಗುಡ್ ನ್ಯೂಸ್: ಕೊನೆಗೂ ‘ಪೆದ್ದಿ’ ಸಿನಿಮಾ ರಿಲೀಸ್ ಗೆ ಡೇಟ್ ಫಿಕ್ಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಪೆದ್ದಿ’ ಬಿಡುಗಡೆಗೆ ಸಜ್ಜಾಗಿದ್ದು, ಈ ಮೂಲಕ ಅಭಿಮಾನಿಗಳಿಗೆ ಚಿತ್ರತಂಡ ಸಿಹಿಸುದ್ದಿಯನ್ನು ನೀಡಿದೆ.

ಈಗಾಗಲೇ ಮೂರು ಬಾರಿ ಸಿನಿಮಾ ತಂಡ ನಿಗದಿಯಾಗಿದ್ದ ದಿನಾಂಕವನ್ನು ಮುಂದೂಡಿದ್ದು, ಇದೀಗ ಕೊನೆಗೂ ಜೂನ್ 4ರಂದು ಅದ್ದೂರಿಯಾಗಿ ತೆರೆಗೆ ಬರಲಿದೆ.

ಯಶ್‌ ಅವರ ಬಹುನೀರಿಕ್ಷಿತ ‘ಟಾಕ್ಸಿಕ್’ ಸಿನಿಮಾ ಜೂನ್ 4ಕ್ಕೆ ತೆರೆಗೆ ಬರಲು ಸಜ್ಜಾಗಿತ್ತು. ಆದರೆ ಕಾರಣಾಂತರದಿಂದಾಗಿ ಪ್ಲ್ಯಾನ್ ಬದಲಾಯಿತು. ಹೀಗಾಗಿ ಆ ದಿನಾಂಕಕ್ಕೆ ‘ಪೆದ್ದಿ’ ಸಿನಿಮಾವನ್ನು ಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗಿದೆ.

ಬುಚ್ಚಿ ಬಾಬು ಸನಾ ನಿರ್ದೇಶನದ ಈ ಚಿತ್ರದಲ್ಲಿ ರಾಮ್ ಚರಣ್‌ಗೆ ಜೋಡಿಯಾಗಿ ಬಾಲಿವುಡ್ ನಟಿ ಜಾನ್ವಿ ಕಪೂರ್ ನಟಿಸುತ್ತಿದ್ದಾರೆ. ಸ್ಯಾಂಡಲ್ ವುಡ್ ನಟ ಶಿವರಾಜ್‌ಕುಮಾರ್ ಅವರು ಈ ಚಿತ್ರದಲ್ಲಿ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಈಗಾಗಲೇ ಈ ಚಿತ್ರದ ‘ಚಿಕಿರಿ ಚಿಕಿರಿ’ ಹಾಡು ಬಿಡುಗಡೆಯಾಗಿ ಸೋಶಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸಿದೆ.

Must Read