Sunday, December 10, 2023

Latest Posts

ಪಡಿತರ ಫಲಾನುಭವಿಗಳಿಗೆ ಗುಡ್ ನ್ಯೂಸ್: ಹೆಚ್ಚುವರಿ ಅಕ್ಕಿ ಸಿಗುವರೆಗೆ ಹಣ ಪಾವತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಅನ್ನಭಾಗ್ಯ ಯೋಜನೆಯಡಿ ಪಡಿತರ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ಹಾಗೂ 5 ಕೆಜಿ ಹೆಚ್ಚುವರಿ ಅಕ್ಕಿಯ ಬದಲಾಗಿ ಖಾತೆಗೆ ಹಣ ಪಾವತಿಸಲಾಗುತ್ತಿದ್ದು, ಇದು ಎಲ್ಲಿವರೆಗೆ ಅಕ್ಕಿ ಸಿಗುವುದಿಲ್ಲವೋ ಅಲ್ಲಿಯವರೆಗೂ ಖಾತೆಗೆ ಹಣ ಪಾವತಿಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಕಡಿಮೆ ದರ 10 ಕೆಜಿ ಅಕ್ಕಿ ಸಿಗುವವರೆಗೆ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ತೆಲಂಗಾಣ, ಆಂಧ್ರಪ್ರದೇಶದಲ್ಲಿ ಅಕ್ಕಿ ದರ ಜಾಸ್ತಿ ಇದೆ. ನಾವು ಎಫ್.ಸಿ.ಐ.ಗೆ ಕೊಡುವ ದರಕ್ಕೆ ಕೇಳುತ್ತಿದ್ದೇವೆ. ಆದರೆ, ಅವರು ಆ ದರಕ್ಕೆ ಅಕ್ಕಿ ಕೊಡುತ್ತಿಲ್ಲ. ನಮ್ಮ ದರಕ್ಕೆ ಅಕ್ಕಿ ಸಿಗದ ಕಾರಣ 10 ಕೆಜಿ ಅಕ್ಕಿ ಸಿಗುವವರೆಗೆ 5 ಕೆಜಿ ಪಡಿತರ ವಿತರಿಸಿ ಖಾತೆಗೆ 5 ಕೆಜಿ ಹಣ ನೀಡಲು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!