RCB ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಗಾಯಗೊಂಡಿದ್ದ ಸ್ಟಾರ್‌ ಪ್ಲೇಯರ್‌ ಟೀಂಗೆ ವಾಪಾಸ್‌!

ಹೊಸದಿಗಂತ ಡಿಜಿಟಲ್ ಡೆಸ್ಕ್:

2025ರ ಐಪಿಎಲ್ ಆರಂಭವಾಗುವ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಹಾಗೂ ಅಭಿಮಾನಿಗಳಿಗೆ ಒಳ್ಳೆಯ ಸುದ್ದಿ ಸಿಕ್ಕಿದೆ.

ಈ ವರ್ಷ ಐಪಿಎಲ್‌ನಿಂದ ಹೊರಗುಳಿಯುವ ನಿರೀಕ್ಷೆಯಲ್ಲಿದ್ದ ಇಂಗ್ಲೆಂಡ್ ಆಟಗಾರ ಜಾಕೋಬ್ ಬೆಥೆಲ್ ಗಾಯದಿಂದ ಚೇತರಿಸಿಕೊಂಡಿದ್ದಾರೆ. ಮೊದಲ ಪಂದ್ಯದಿಂದಲೇ ಬೆಥೆಲ್ ಲಭ್ಯವಿರುತ್ತಾರೆ ಎಂದು ವರದಿಯಾಗಿದೆ.

ಭಾರತ ವಿರುದ್ಧದ ಸೀಮಿತ ಓವರ್‌ಗಳ ಸರಣಿಯ ಸಮಯದಲ್ಲಿ ಬೆಥೆಲ್ ಗಾಯಗೊಂಡಿದ್ದು, ಇದೇ ಕಾರಣದಿಂದ ಇಡೀ ಟೂರ್ನಿಯಿಂದ ಹೊರಬಿದ್ದಿದ್ದರು. ಬೆಥೆಲ್ ಬದಲಿಗೆ ಜೇಮೀ ಸ್ಮಿತ್ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದರು.

ಬೆಥೆಲ್ ತಮ್ಮ ಅಂತಾರಾಷ್ಟ್ರೀಯ ವೃತ್ತಿಜೀವನದಲ್ಲಿ ಒಟ್ಟು 674 ರನ್ ಹಾಗೂ ಐದು ವಿಕೆಟ್‌ಗಳನ್ನು ಪಡೆದಿದ್ದಾರೆ. ಆಸ್ಟ್ರೇಲಿಯಾದಲ್ಲಿ ನಡೆದ ಬಿಗ್​ ಬ್ಯಾಶ್ ಲೀಗ್​​ನಲ್ಲೂ ಅತ್ಯುತ್ತಮ ಆಲ್​ರೌಂಡ್ ಪ್ರದರ್ಶನ ನೀಡಿ ಗಮನ ಸೆಳೆದಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!