September 7, 2026
Monday, September 7, 2026
spot_img

ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ಸರ್ಕಾರಿ ಸೀಟುಗಳಲ್ಲಿ 7.5% ಮೀಸಲಾತಿ, ಕರುಡು ನಿಯಮ ಪ್ರಕಟ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲಾ-ಕಾಲೇಜುನಲ್ಲಿ ಓದಿದ ವಿದ್ಯಾರ್ಥಿಗಳಿಗೆ ವೃತ್ತಿಪರ ಶಿಕ್ಷಣದ ಸರ್ಕಾರಿ ಸೀಟುಗಳಲ್ಲಿ ಹೆಚ್ಚಿನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮಹತ್ವದ ಪ್ರಸ್ತಾವನೆ ಮುಂದಿಟ್ಟಿದೆ.

ಶೇ. 15 ರಷ್ಟು ಮೀಸಲಾತಿ

ಉನ್ನತ ಶಿಕ್ಷಣ ಇಲಾಖೆ ಸೆಪ್ಟೆಂಬರ್ 5ರಂದು ಕರ್ನಾಟಕ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಸರ್ಕಾರಿ ಸೀಟುಗಳಿಗೆ ಅಭ್ಯರ್ಥಿಗಳ ಆಯ್ಕೆ ನಿಯಮಗಳು, 2006ಕ್ಕೆ ತಿದ್ದುಪಡಿ ಮಾಡುವ ಕರಡು ನಿಯಮಗಳನ್ನು ಪ್ರಕಟಿಸಿದೆ. ಇದರ ಪ್ರಕಾರ, ಗ್ರಾಮೀಣ ವಿದ್ಯಾರ್ಥಿಗಳಿಗೆ ಒಟ್ಟಾರೆ ಶೇ. 15 ರಷ್ಟು ಮೀಸಲಾತಿ ನೀಡಲಾಗುತ್ತಿದೆ. ಇದರಲ್ಲಿ ಇನ್ನುಮುಂದೆ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೇ.7.5 ರಷ್ಟು ಮತ್ತು ಗ್ರಾಮೀಣ ಪ್ರದೇಶದಲ್ಲಿರುವ ಯಾವುದೇ (ಖಾಸಗಿ ಸೇರಿದಂತೆ) ಶಿಕ್ಷಣ ಸಂಸ್ಥೆಗಳು/ಶಾಲೆಗಳಲ್ಲಿ 10ನೇ ತರಗತಿವರೆಗೆ ವ್ಯಾಸಂಗ ಮಾಡಿದ ಅರ್ಹ ಗ್ರಾಮೀಣ ಅಭ್ಯರ್ಥಿಗಳಿಗೆ ಶೇಕಡ 7.5 ರಷ್ಟು ಮೀಸಲಾತಿ ನೀಡಲಾಗುತ್ತದೆ.

ಇದನ್ನೂ ಓದಿ:

ಆಕ್ಷೇಪಣೆಗೆ 15 ದಿನ ಅವಕಾಶ

ಗ್ರಾಮೀಣ ಹಿನ್ನೆಲೆಯ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್‌ಗಳ ಪ್ರವೇಶದಲ್ಲಿ ಹೆಚ್ಚಿನ ಅವಕಾಶ ಕಲ್ಪಿಸುವುದು ಈ ಪ್ರಸ್ತಾವನೆಯ ಪ್ರಮುಖ ಉದ್ದೇಶವಾಗಿದೆ. ಕರಡು ನಿಯಮಗಳ ಕುರಿತು ಸಾರ್ವಜನಿಕರಿಂದ ಆಕ್ಷೇಪಣೆ ಹಾಗೂ ಸಲಹೆಗಳನ್ನು ಆಹ್ವಾನಿಸಲಾಗಿದೆ. ಅಧಿಕೃತ ರಾಜ್ಯಪತ್ರದಲ್ಲಿ ಕರಡು ಪ್ರಕಟವಾದ ದಿನದಿಂದ 15 ದಿನಗಳೊಳಗೆ ಆಕ್ಷೇಪಣೆ ಅಥವಾ ಸಲಹೆ ಸಲ್ಲಿಸಲು ಅವಕಾಶ ನೀಡಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !