February 13, 2026
Friday, February 13, 2026
spot_img

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌: ಎಕ್ಸಾಂಗೆ ಹೋಗೋ ವೇಳೆ ಕೆಎಸ್‌ಆರ್‌ಟಿಸಿ ಬಸ್​​​ನಲ್ಲಿ ಉಚಿತ ಪ್ರಯಾಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಇದೇ ತಿಂಗಳ 28ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವಿದ್ಯಾರ್ಥಿಗಳಿಗೆ ಖುಷಿ ಸುದ್ದಿ ನೀಡಿದೆ.

ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗಿದೆ. ಈ ಬಗ್ಗೆ ಕೆಎಸ್‌ಆರ್‌ಟಿಸಿ ಅಧಿಕೃತ ಆದೇಶ ಹೊರಡಿಸಿದೆ.

ಪರೀಕ್ಷಾ ಪ್ರವೇಶ ಪತ್ರವನ್ನು ವಿದ್ಯಾರ್ಥಿಗಳ ಬಸ್‌ಪಾಸ್‌ ಎಂದು ಪರಿಗಣಿಸಲಾಗುತ್ತದೆ. ಪರೀಕ್ಷೆ ಬರೆಯಲು ಹೋಗುವಾಗ ಹಾಗೂ ಪರೀಕ್ಷೆ ಮುಗಿಸಿ ಮನೆಗೆ ಹಿಂದಿರುಗುವಾಗಲೂ ಈ ಸೌಲಭ್ಯ ಅನ್ವಯವಾಗಲಿದೆ. ಗ್ರಾಮೀಣ ಮತ್ತು ನಗರ ಪ್ರದೇಶದ ವಿದ್ಯಾರ್ಥಿಗಳು ಸಾರಿಗೆ ಸಮಸ್ಯೆಯಿಂದಾಗಿ ಪರೀಕ್ಷೆಗೆ ಗೈರಾಗಬಾರದು ಅಥವಾ ವಿಳಂಬವಾಗಬಾರದು ಎಂಬ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !