ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಸಿಎಂ ಸಿದ್ದರಾಮಯ್ಯ ತಮ್ಮ 16ನೇ ಬಜೆಟ್ ಮಂಡನೆ ಮಾಡುತ್ತಿದ್ದು, ರೇಷ್ಮೆ ಬೆಳೆಗಾರರಿಗೆ ಗುಡ್‌ನ್ಯೂಸ್ ನೀಡಿದ್ದಾರೆ.
ಮಧ್ಯಮ ವರ್ಗದ ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ 120 ಕೊನೆಗಳ ಸ್ವಯಂಚಾಲಿತ ರೀಲಿಂಗ್ ಘಟಕಗಳ ಸ್ಥಾಪನೆ, ರಾಮನಗರ ಮತ್ತು ಶಿಡ್ಲಘಟ್ಟ ಹೈಟೆಕ್ ರೇಷ್ಮೆ ಗೂಡಿನ ಮೊದಲ ಹಂತದ ಕಾಮಗಾರಿ ಪೂರ್ಣ, ಪ್ರಸ್ತಕ ಸಾಲಿನಲ್ಲಿ ಎರಡನೇ ಹಂತದ ಕಾಮಗಾರಿಗೆ 250 ಕೋಟಿ ರೂ. ವೆಚ್ಚ, ಮೈಸೂರಿನಲ್ಲಿ ರೇಷ್ಮೆಗೂಡಿನ ಮಾರುಕಟ್ಟೆ ನಬಾರ್ಡ್ ಸಹಯೋಗದಲ್ಲಿ ಸ್ಥಾಪನೆ ಹಾಗೂ ರೇಷ್ಮೆ ಬೆಳೆ ವಿಸ್ತರಿಸಲು 55 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ.