SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ವಾರ್ಷಿಕ ಪರೀಕ್ಷೆಯಂದು KSRTC ಬಸ್ಸಿನಲ್ಲಿ ಉಚಿತ ಪ್ರಯಾಣ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಾರ್ಷಿಕ ಪರೀಕ್ಷೆಯಂದು ಕೆಎಸ್‌ಆರ್ ಟಿಸಿ ಬಸ್ಸಿನಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ಪ್ರಯಾಣಿಸಲು ಅವಕಾಶ ಮಾಡಿಕೊಡಲಾಗಿದೆ.

ಈ ಕುರಿತಂತೆ ಕೆಎಸ್‌ಆರ್ ಟಿಸಿಯ ಮುಖ್ಯ ಸಂಚಾರ ವ್ಯವಸ್ಥಾಪಕು ಸುತ್ತೋಲೆ ಹೊರಡಿಸಿದ್ದಾರೆ. ಮಾರ್ಚ್ 25 ರಿಂದ ಏಪ್ರಿಲ್ 06 ರವರೆಗೆ, ಪರೀಕ್ಷೆಗೆ ಹಾಜರಾಗುವ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪ್ರವೇಶ ಪತ್ರವನ್ನುತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಸಂಬಂಧ, ನಿಗಮದ ಎಲ್ಲಾ ಚಾಲಕರು ಹಾಗೂ ನಿರ್ವಾಹಕರುಗಳಿಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಾಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪ್ರಯಾಣಿಸಲು ಅನುಮತಿಸಲು ಸೂಕ್ತ ತಿಳುವಳಿಕೆ ನೀಡಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಪ್ರವೇಶ ಪತ್ರದ ಆಧಾರದ ಮೇಲೆ ಬಸ್ಸುಗಳ ಕಾರ್ಯಾಚರಣಾ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿದ್ದಲ್ಲಿ, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸದರಿ ಮಾರ್ಗಗಳಲ್ಲಿ ಕೋರಿಕೆ ನಿಲುಗಡೆ ನೀಡಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.ಚಾಲನಾ ಸಿಬ್ಬಂದಿಗಳು ಮೇಲ್ಕಂಡ ನಿರ್ದೇಶನಗಳನ್ನು ತಪ್ಪದೇ ಪಾಲಿಸುವಂತೆ ತಿಳಿಸುವುದು. ಈ ವಿಷಯವನ್ನು ಎಲ್ಲಾ ಘಟಕ ಮತ್ತು ಬಸ್ ನಿಲ್ದಾಣಗಳ ಸೂಚನಾ ಫಲಕಗಳಲ್ಲಿ ಪ್ರದರ್ಶಿಸಿ ಮೇಲ್ಕಂಡ ನಿರ್ದೇಶನಗಳನ್ನು ಜಾರಿಗೊಳಿಸಲು ಕ್ರಮ ವಹಿಸುವಂತೆ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!