ಹೊಸದಿಗಂತ ಡಿಜಿಟಲ್ ಡೆಸ್ಕ್ :
ರಾಜ್ಯ ಸರ್ಕಾರವು ಹಲವು ವರ್ಷಗಳ ಸಾರಿಗೆ ನೌಕರರ ಬೇಡಿಕೆಗೆ ರಾಮನವಮಿಯಂದು ಸಿಹಿ ಸುದ್ದಿ ನೀಡಿದೆ.
ಕರ್ನಾಟಕ ಸಾರಿಗೆ ನೌಕರರ ವೇತನ ಶ್ರೇಣಿ ಶೇ.15ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
2023ರ ಮಾರ್ಚ್ ತಿಂಗಳಿನಿಂದಲೇ ನೂತನ ವೇತನ ಜಾರಿಗೊಳಿಸುವಂತೆ ಸರ್ಕಾರ ಅದೇಶಿಸಿದೆ.
ಈ ಮೂಲಕ ನಾಲ್ಕೂ ನಿಗಮಗಳ (ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕಲ್ಯಾಣ ಕರ್ನಾಟಕ ಸಾರಿಗೆ, ವಾಯುವ್ಯ ಕರ್ನಾಟಕ ಸಾರಿಗೆ) ಸಾರಿಗೆ ನೌಕರರಿಗೆ ವೇತನ ಹೆಚ್ಚಿಸಲಾಗಿದೆ.