Friday, September 29, 2023

Latest Posts

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತ ಲ್ಯಾಪ್ ಟಾಪ್ ವಿತರಣೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ SC, ST ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್ಸಿಎಸ್ಪಿ) ಮತ್ತು ಬುಡಕಟ್ಟು ಉಪ ಯೋಜನೆ (ಟಿಎಸ್ಪಿ) ಯೋಜನೆಗಳಡಿ ಉಚಿತ ಲ್ಯಾಪ್ ಟಾಪ್ ಗಳನ್ನು ವಿತರಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದು, ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಅನ್ನು ಎಸ್.ಸಿ.ಎಸ್.ಪಿ / ಟಿ.ಎಸ್.ಪಿ ಯೋಜನೆಯಡಿ ವಿತರಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಲ್ಯಾಪ್ ಟಾಪ್ ವಿತರಿಸುವ ಸಂಬಂಧ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಯೋಜನೆ ಅಡಿ 230 ಕೋಟಿ ರೂ. ಒದಗಿಸುವಂತೆ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಯವರಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!