ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ ಏಕಕಾಲದಲ್ಲಿ ಎರಡು ಪದವಿ ಕೋರ್ಸ್​ ಕಲಿಕೆಗೆ ಅವಕಾಶ!

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಇನ್ಮುಂದೆ ಒಂದೇ ಬಾರಿ ಎರಡು ಪೂರ್ಣಾವಧಿಯ ಪದವಿ ಕೋರ್ಸ್ ಗಳನ್ನೂ ಒಂದೇ ವಿಶ್ವವಿದ್ಯಾಲಯ ಅಥವಾ ಬೇರೆ ಬೇರೆ ವಿಶ್ವವಿದ್ಯಾಲಯಗಳಿಂದ ಕಲಿಯಲು ವಿಶ್ವವಿದ್ಯಾಲಯಗಳ ಧನಸಹಾಯ ಆಯೋಗ ಅವಕಾಶ ನೀಡಲಿದೆ ಎಂದು ಯುಜಿಸಿ ಅಧ್ಯಕ್ಷ ಜಗದೀಶ್ ಕುಮಾರ್​ ಮಾಹಿತಿ ನೀಡಿದ್ದಾರೆ.
ಇದಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿ ಮಾತನಾಡಿರುವ ಅವರು, ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಅಂಗವಾಗಿ ವಿದ್ಯಾರ್ಥಿಗಳು ಎರಡು ಪೂರ್ಣಾವಧಿಯ ಪದವಿ ಕೋರ್ಸ್ ಕಲಿಯಬಹುದಾಗಿದೆ ಎಂದಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಮುಂದಿನ ಕೆಲ ದಿನಗಳಲ್ಲಿ ಮಹತ್ವದ ಮಾರ್ಗಸೂಚಿ ಪ್ರಕಟಗೊಳ್ಳಲಿದೆ ಎಂದರು.
ವಿದ್ಯಾರ್ಥಿಗಳು ಬಹುಮುಖ ಪ್ರತಿಭೆ ವೃದ್ಧಿ ಮಾಡಿಕೊಳ್ಳುವ ಉದ್ದೇಶದಿಂದ ಈ ಅವಕಾಶ ನೀಡಲಾಗುತ್ತಿದೆ. , ಭೌತಿಕ ಅಥವಾ ಆನ್​ಲೈನ್ ಮೂಲಕ ಸಹ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದರು.
ಈ ಹಿಂದೆ ಭಾರತದಲ್ಲಿ ಓರ್ವ ವಿದ್ಯಾರ್ಥಿ ಏಕಕಾಲದಲ್ಲಿ ಎರಡು ವಿಭಿನ್ನ ಕೋರ್ಸ್​​​ ಓದಲು ಅವಕಾಶವಿಲ್ಲ. ಆದರೆ, ರಾಷ್ಟ್ರೀಯ ಶಿಕ್ಷಣ ನೀತಿ 2020 ಅಡಿಯಲ್ಲಿ ಕೇಂದ್ರ ಸರ್ಕಾರ 2040ರ ವೇಳಗೆ ಶಿಕ್ಷಣ ವ್ಯವಸ್ಥೆಯಲ್ಲಿ ಗಣನೀಯವಾದ ಪರಿವರ್ತನೆ ತರಲು ಮುಂದಾಗಿದೆ. ಹೀಗಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!