ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ವಿದ್ಯಾರ್ಥಿ ನಿಲಯಗಳಲ್ಲಿ ಶೇ.25 ರಷ್ಟು ಪ್ರವೇಶಾವಕಾಶ ಹೆಚ್ಚಳ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಸಿಕ್ಕಿದ್ದು, ವಿದ್ಯಾರ್ಥಿ ನಿಲಯಗಳಲ್ಲಿ ಶೇ.25 ರಷ್ಟು ಪ್ರವೇಶಾವಕಾಶ ಹೆಚ್ಚಳ ಮಾಡಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ರಾಜ್ಯದಲ್ಲಿ ವಿದ್ಯಾರ್ಥಿ ನಿಲಯ ಸಿಗದೆ ಸಂಕಷ್ಟ ಎದುರಿಸುತ್ತಿದ್ದ ಸುಮಾರು 25 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲು ಸರ್ಕಾರ ಮುಂದಾಗಿದ್ದು, ಈ ನಿಟ್ಟಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರವೇಶ ಒದಗಿಸುವ ಉದ್ದೇಶದಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ಶೇ.25 ರಷ್ಟು ಪ್ರವೇಶಾವಕಾಶ ಹೆಚ್ಚಿಸಲಾಗುತ್ತಿದೆ ಎಂದು ಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಇದರಿಂದ ಉಂಟಾಗುವ ಹೆಚ್ಚುವರಿ ವೆಚ್ಚವನ್ನು ವಿದ್ಯಾಸಿರಿ ಯೋಜನೆಗೆ ಒದಗಿಸುವ ಅನುದಾನದಿಂದ ಬಳಸಿಕೊಳ್ಳುವ ಇಲಾಖೆಯ ಪ್ರಸ್ತಾವನೆಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದ್ದು ಈ ಯೋಜನೆಯನ್ನು ಪ್ರಸಕ್ತ ಸಾಲಿನಲ್ಲಿಯೇ ಅನುಷ್ಠಾನಗೊಳಿಸಲಾಗುವುದು ಎಂದು ಅವರು ಹೇಳಿದರು.
ಈ ಪ್ರಸ್ತಾವನೆಯ ಅನುಷ್ಠಾನಕ್ಕೆ 54.20 ಕೋಟಿ ರೂ. ಅನುದಾನ ಬೇಕಾಗಿದ್ದು, ತುರ್ತಾಗಿ 7.50 ಕೋಟಿ ರೂ ಅನುದಾನ ಒದಗಿಸುವಂತೆ ಹಾಗೂ ಸಂಖ್ಯಾಬಲ ಹೆಚ್ಚಳದ ಜೊತೆಯಲ್ಲಿಯೇ ಅಗತ್ಯವಿರುವ 190 ಅಡುಗೆಯವರು, 328 ಅಡುಗೆ ಸಹಾಯಕರು ಸೇರಿ ಒಟ್ಟು 518 ಹುದ್ದೆಗಳನ್ನು ಸೃಜಿಸಲು ಕೋರಲಾಗಿತ್ತು.
ಇದೀಗ ಆರ್ಥಿಕ ಇಲಾಖೆ ಪ್ರಸ್ತಾವನೆಗೆ ಸಹಮತಿ ನೀಡಿರುವುದರಿಂದ ಅನುಷ್ಠಾನ ಕಾರ್ಯ ಶೀಘ್ರವೇ ಅಗಲಿದೆ ಎಂದು ಅನುಮೋದಿಸಿದ ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೃತಜ್ಞತೆ ಸಲ್ಲಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!