May 5, 2026
Tuesday, May 5, 2026
spot_img

ಕೇಂದ್ರ ಸರ್ಕಾರದಿಂದ ಕಬ್ಬು ಬೆಳೆಗಾರರಿಗೆ ಗುಡ್ ನ್ಯೂಸ್: ಕ್ವಿಂಟಾಲ್ ಗೆ 365 ರೂ. ಬೆಂಬಲ ಬೆಲೆ ಹೆಚ್ಚಿಸಲು ಸಮ್ಮತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಸರ್ಕಾರದಿಂದ ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಬೆಂಬಲ ಬೆಲೆ ಹೆಚ್ಚಿಸಲು ಕೇಂದ್ರ ಸಚಿವ ಸಂಪುಟವು ಅನುಮೋದನೆ ನೀಡಿದೆ.

ಈ ಕುರಿತು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರು ಮಾಹಿತಿ ಹಂಚಿಕೊಂಡಿದ್ದು, 2026-27ನೇ ಹಂಗಾಮಿ ಕಬ್ಬಿಗೆ ಶೇ.10.25 ಮೂಲ ರಿಕವರಿ ದರದ ಮೇಲೆ ಪ್ರತಿ ಕ್ವಿಂಟಲ್ ಗೆ 365 ರೂ . ನ್ಯಾಯೋಚಿತ ಮತ್ತು ಲಾಭದಾಯಕ ಬೆಲೆಯನ್ನು ಅನುಮೋದಿಸಿದೆ. ಈ ಮೂಲಕ ದೇಶದ ಸುಮಾರು 5 ಕೋಟಿ ಕಬ್ಬು ಬೆಳೆಗಾರರು ಮತ್ತವರ ಕುಟುಂಬಗಳಿಗೆ ನೆರವಾಗಲಿದೆ ಎಂದು ತಿಳಿಸಿದರು.

ಕಬ್ಬಿನ ‎ರಿಕವರಿಯಲ್ಲಿ 0.1% ಏರಿಕೆಗೆ 3.56 ಪ್ರತಿ ಕ್ವಿಂಟಲ್ ಹೆಚ್ಚುವರಿ ಪ್ರೋತ್ಸಾಹಧನ ನೀಡುವುದರ ಜತೆಗೆ ರಿಕವರಿ 9.5% ಅಥವಾ ಅದಕ್ಕಿಂತ ಕಡಿಮೆ ಇದ್ದರೂ ಯಾವುದೇ ಕಡಿತವಿಲ್ಲದೆ ಕ್ವಿಂಟಲ್ ಗೆ 338.3 ರೂ .ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ಇದರಿಂದ ಕರ್ನಾಟಕದ 8 ರಿಂದ 10 ಲಕ್ಷ ರೈತರಿಗೆ ಪ್ರಯೋಜನವಾಗಲಿದೆ ಎಂದರು.

ಕಬ್ಬು ಬೆಳೆಗಾರರು ಮಾತ್ರವಲ್ಲದೆ, ಸಕ್ಕರೆ ಕಾರ್ಖಾನೆಗಳು ಹಾಗೂ ಸಕ್ಕರೆ ಉದ್ಯಮದ 5 ಲಕ್ಷಕ್ಕೂ ಅಧಿಕ ಕಾರ್ಮಿಕರಿಗೂ ಸಹಕಾರಿಯಾಗಲಿದೆ. ಮಸ್ತ ಸಕ್ಕರೆ ಉದ್ಯಮ ಮತ್ತು ಕೃಷಿ ಕ್ಷೇತ್ರವನ್ನು ಮತ್ತಷ್ಟು ಸಶಕ್ತಗೊಳಿಸುವಲ್ಲಿ ಪ್ರಧಾನಿ ಮೋದಿ ಬದ್ಧತೆಯನ್ನು ಪುನರುಚ್ಚರಿಸುತ್ತದೆ ಎಂದು ಸಚಿವ ಜೋಶಿ ತಿಳಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !