ಹೊಸದಿಗಂತ ಡಿಜಿಟಲ್ ಡೆಸ್ಕ್:
2025-26ರ ಹಂಗಾಮಿನಲ್ಲಿ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಕೆ ಮಾಡಿದ ರೈತರಿಗೆ, ಕಾರ್ಖಾನೆಗಳು ಪಾವತಿಸಬೇಕಾದ ಎಫ್.ಆರ್.ಪಿ. ದರ ಹೊರತುಪಡಿಸಿ ಹೆಚ್ಚುವರಿಯಾಗಿ ರಾಜ್ಯ ಸರ್ಕಾರದಿಂದ 50 ರೂಪಾಯಿಯನ್ನು ಪಾವತಿಸಲು ತೀರ್ಮಾನಿಸಲಾಗಿದೆ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಇದರೊಂದಿಗೆ ಸಕ್ಕರೆ ಕಾರ್ಖಾನೆಗಳ ವತಿಯಿಂದಲೂ ಪ್ರತಿ ಟನ್ಗೆ 50 ರೂಪಾಯಿಯನ್ನು ಹೆಚ್ಚುವರಿಯಾಗಿ ಪಾವತಿಸಲಾಗುತ್ತದೆ ರೈತರಿಗೆ ಒಟ್ಟಾರೆಯಾಗಿ ಪ್ರತಿ ಟನ್ಗೆ 100 ರೂಪಾಯಿ ಹೆಚ್ಚುವರಿ ಮೊತ್ತ ಪಾವತಿಸಲು ಕ್ರಮ ವಹಿಸಲಾಗಿದೆ. ಸರ್ಕಾರದ ಆದೇಶದಂತೆ ಅನುದಾನ ಬಿಡುಗಡೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಈ ಸಭೆಯಲ್ಲಿ ಸಕ್ಕರೆ ಕಾರ್ಖಾನೆಗಳ ಅಧಿಕಾರಿಗಳು ಹಾಗೂ ಜಿಲ್ಲಾ ಖಜಾನೆ ಅಧಿಕಾರಿಗಳು ಉಪಸ್ಥಿತರಿದ್ದರು.



