Saturday, December 9, 2023

Latest Posts

ರಾಜ್ಯ ಸರ್ಕಾರದಿಂದ ಹುತಾತ್ಮ ಯೋಧರ ಕುಟುಂಬಕ್ಕೆ ಸಿಹಿ ಸುದ್ದಿ: ಸರ್ಕಾರಿ ನೌಕರಿ ನೀಡಲು ಸರ್ಕಾರ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯ ಸರ್ಕಾರದಿಂದ ಹುತಾತ್ಮ ಯೋಧರ ಕುಟುಂಬದ ಸದಸ್ಯರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ನೌಕರಿ ನೀಡಲು ನಿರ್ಧರಿಸಲಾಗಿದೆ.
ಈ ಕುರಿತಂತೆ ಪೊಲೀಸ್ ಸಹಾಯಕ ಸೇವೆಗಳು, ಒಳಾಡಳಿತ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದಾರೆ. ಅದರಲ್ಲಿ ದೇಶದ ಆಂತರಿಕ ಹಾಗೂ ಬಾಹ್ಯ ಸುರಕ್ಷತೆಗಾಗಿ ಹೋರಾಡುವ ಯೋಧರು ತಮ್ಮ ಪ್ರಣ ಪಣಕ್ಕಿಟ್ಟು ದೇಶದ ಜನತೆಯ ಭದ್ರತೆಯನ್ನು ಕಾಯ್ದುಕೊಳ್ಳುವಲ್ಲಿ ಗಣನಿಯ ಸೇವೆ ಸಲ್ಲಿಸುತ್ತಿದ್ದಾರೆ ಎಂದಿದ್ದಾರೆ.
ಕರ್ನಾಟಕ ರಾಜ್ಯ ಮೂಲ ನಿವಾಸಿಗಳಾದ ಯುದ್ಧ, ಯುದ್ಧದನಂತಹ ಕಾರ್ಯಾಚರಣೆಯಲ್ಲಿ ಪಾಲ್ಗೊಂಡು ವೀರ ಮರಣವನ್ನಪ್ಪಿದ ಯೋಧರ ಕುಟುಂಬದ ಸದಸ್ಯರುಗಳಿಗೆ, ಆಸರೆಯಾಗಿ ನಿಲ್ಲುವ ಉದ್ದೇಶದಿಂದ ಅವರ ಅವಲಂಬಿತರಲ್ಲಿ ಒಬ್ಬರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಕೆಲಸ ನೀಡಲು ಸರ್ಕಾರವು ತಾತ್ವಿಕ ಅನುಮೋದನೆ ನೀಡಿದೆ ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!