March 21, 2026
Saturday, March 21, 2026
spot_img

ಹೊಟೇಲ್, ರೆಸ್ಟೋರೆಂಟ್​​ ಉದ್ಯಮಕ್ಕೆ ಗುಡ್ ನ್ಯೂಸ್: ವಾಣಿಜ್ಯ ಎಲ್‌ಪಿಜಿ ಪೂರೈಕೆ ಹೆಚ್ಚಿಸಿದ ಕೇಂದ್ರ ಸರಕಾರ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮದ್ಯಪ್ರಾಚ್ಯದಲ್ಲಿನ ಸಂಘರ್ಷದಿಂದ ದೇಶದಲ್ಲಿ ಎಲ್‌ಪಿಜಿ ಕೊರತೆ ಹೆಚ್ಚುತ್ತಿದ್ದು, ಇದರ ನಡುವೆ ಕೇಂದ್ರ ಸರಕಾರ ಹೊಟೇಲ್ ಮತ್ತು ರೆಸ್ಟೋರೆಂಟ್ ಮಾಲೀಕರಿಗೆ ಸಿಹಿ ಸುದ್ದಿ ನೀಡಿದೆ. ರಾಜ್ಯಗಳಿಗೆ ಹೆಚ್ಚುವರಿಯಾಗಿ ಶೇ. 20 ರಷ್ಟು ವಾಣಿಜ್ಯ ಎಲ್‌ಪಿಜಿ ಹಂಚಿಕೆಗೆ ಅನುಮತಿ ನೀಡಿದೆ.

ಈ ಕುರಿತು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಮಾಹಿತಿ ನೀಡಿದ್ದು, ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಮಾರ್ಚ್ 23 ರಿಂದ ಹೆಚ್ಚುವರಿ ಶೇ. 20ರಷ್ಟು ಎಲ್‌ಪಿಜಿ ಹಂಚಿಕೆ ಮಾಡಲಾಗುವುದು. ಈ ಮೂಲಕ ಒಟ್ಟು ಹಂಚಿಕೆಯನ್ನು ಶೇ. 50 ಕ್ಕೆ ಹೆಚ್ಚಿಸಲಾಗಿದೆ. ಮುಂದಿನ ಆದೇಶದವರೆಗೆ ಈ ವ್ಯವಸ್ಥೆ ಜಾರಿಯಲ್ಲಿರುತ್ತದೆ ಎಂದು ತಿಳಿಸಿದೆ.

ಮುಖ್ಯವಾಗಿ ಗ್ಯಾಸ್ ಅಭಾವದಿಂದ ಕಂಗೆಟ್ಟಿರುವ ರೆಸ್ಟೋರೆಂಟ್, ಧಾಬಾ, ಹೊಟೇಲ್, ಕೈಗಾರಿಕಾ ಕ್ಯಾಂಟೀನ್, ಆಹಾರ ಸಂಸ್ಕರಣೆ ಮತ್ತು ಡೈರಿ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲು ಸೂಚಿಸಲಾಗಿದ್ದು, ಇದರ ಜೊತೆಗೆ ರಾಜ್ಯ ಸರ್ಕಾರ ಅಥವಾ ಸ್ಥಳೀಯ ಸಂಸ್ಥೆಗಳು ನೀಡುತ್ತಿರುವ ಸಬ್ಸಿಡಿ ಊಟದ ಕೇಂದ್ರಗಳು ಮತ್ತು ಸಮುದಾಯ ಅಡುಗೆ ಮನೆಗಳಿಗೆ ಯಾವುದೇ ರೀತಿಯ ಅಡೆತಡೆಗಳಿಲ್ಲದೆ ನಿರಂತರ ಗ್ಯಾಸ್ ಪೂರೈಕೆ ಆಗುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಪೆಟ್ರೋಲಿಯಂ ಸಚಿವಾಲಯ ತಿಳಿಸಿದೆ.

ಇದೇ ವೇಳೆ ಮನೆಗಳಿಗೆ ಎಲ್‌ಪಿಜಿ ಪೂರೈಕೆ ಸ್ಥಿರವಾಗಿದ್ದು, ಯಾವುದೇ ರೀತಿಯ ಕೊರತೆ ಇಲ್ಲ ಮತ್ತು ಸುಗಮವಾಗಿ ವಿತರಣೆ ನಡೆಯುತ್ತಿದೆ. ಇದರಿಂದ ಅವಸರದ ಬುಕಿಂಗ್‌ಗಳು ಕಡಿಮೆಯಾಗಿವೆ ಎಂದು ತಿಳಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !