ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಬೇಸಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಆಲಖೆ ಹೇಳಿದೆ.
ಇಂದಿನಿಂದ ದಕ್ಷಿಣ ಕೇರಳ ಮತ್ತು ಮಧ್ಯ ಕೇರಳದ ಪತ್ತನಂತಿಟ್ಟ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಬಿರುಸಿನಿಂದ ಕೂಡಿದ ಬೇಸಿಗೆ ಮಳೆ ಕಾಣಿಸಿಕೊಳ್ಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ತಿರುವನಂತಪುರಂ ಕೊಲ್ಲಂ ಪತ್ತನಂತಿಟ್ಟ ಎರ್ನಾಕುಳಂ ಇಡುಕ್ಕಿ ಜಿಲ್ಲೆಗಳಲ್ಲಿ ಭಾನುವಾರ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಈ ನಡುವೆ ಉತ್ತರ ಕೇರಳ ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ ಶುಕ್ರವಾರದಿಂದ ಗುಡುಗು ಸಹಿತ ಮಳೆಯಾಗುತ್ತಿದೆ.