ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಯಾವುದೇ ಆಸ್ತಿ ತೆರಿಗೆ ಹೆಚ್ಚಳ ಇಲ್ಲ ಎಂದ ಡಿಸಿಎಂ ಡಿಕೆ ಶಿವಕುಮಾರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಂಗಳೂರು ಜನತೆಗೆ ಡಿಸಿಎಂ ಡಿಕೆ ಶಿವಕುಮಾರ್ ಸಿಹಿ ಸುದ್ದಿ ನೀಡಿದ್ದು, ಸದ್ಯಕ್ಕೆ ಯಾವುದೇ ಆಸ್ತಿ ತೆರಿಗೆ ಹೆಚ್ಚಳ ಇಲ್ಲ, ತೆರಿಗೆ ಹೆಚ್ಚಳವಾಗಲಿದೆ ಎಂಬ ಸುಳ್ಳು ಸುದ್ದಿ ಹರಿದಾಡುತ್ತಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ನಲ್ಲಿ ಮಾಹಿತಿ ನೀಡಿದ ಡಿಸಿಎಂ ಡಿಕೆ ಶಿವಕುಮಾರ್, ಏಪ್ರಿಲ್ 1ರಿಂದ ಅನ್ವಯವಾಗುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ದರ ಏರಿಕೆಯಾಗಲಿದೆ ಎನ್ನುವ ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ.BBMP ಯಾವುದೇ ಆಸ್ತಿ ತೆರಿಗೆಯನ್ನು ಏರಿಕೆ ಮಾಡಿಲ್ಲ 2016ರಲ್ಲಿ ಸೂಚಿಸಿರುವ ದರದಂತೆಯೇ ಪ್ರಸ್ತುತ ಆಸ್ತಿ ತೆರಿಗೆ ದರಗಳು ಚಾಲ್ತಿಯಲ್ಲಿರುತ್ತವೆ ಹಾಗೂ ಮುಂದುವರಿಯಲಿವೆ. ಬೆಂಗಳೂರಿನ ನಿವಾಸಿಗಳು ಆತಂಕಪಡುವ ಅವಶ್ಯಕತೆಯಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!