ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡುತ್ತಿದ್ದು, ಚಿಕ್ಕಬಳ್ಳಾಪುರ ಜನತೆಗೆ ಗುಡ್‌ನ್ಯೂಸ್ ನೀಡಿದ್ದಾರೆ.
ಚಿಂತಾಮಣಿ ತಾಲೂಕಿನಲ್ಲಿ 150 ಕೋಟಿ ರೂ. ವೆಚ್ಚದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಕ ಕಾಲೇಜು ಸ್ಥಾಪನೆ ಮಾಡಲಾಗುವುದು. ಕಲ್ಯಾಣ ಕರ್ನಾಟಕದ 23 ಸಾವಿರ ವಿದ್ಯಾರ್ಥಿಗಳಿಗೆ ಕಾರ್ಯಕ್ರಮ ರೂಪಿಸಲಾಗಿದೆ. 10 ಕೋಟಿ ರೂ. ವೆಚ್ಚದಲ್ಲಿ ವಿಶೇಷ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ ಕೈಗೊಳ್ಳಲಾಗಿದೆ. ರಾಜ್ಯದ 16 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವೃತ್ತಿಪರ ವಿಷಯ ತಜ್ಞರನ್ನು ಪ್ರೊಫೆಸರ್ ಆಫ್ ಪ್ರಾಕ್ಟಿಸ್ರನ್ನಾಗಿ ನೇಮಕ ಮಾಡಲಾಗಿದೆ. 30 ಕೋಟಿ ರೂ. ವೆಚ್ಚದಲ್ಲಿ ಯುಯುಸಿಎಂಎಸ್ ತಂತ್ರಾಂಶ ಉನ್ನತೀಕರಣ ಮಾಡಲಾಗುವುದು ಎಂದರು.