ರಾಜ್ಯದ ಜನತೆಗೆ ಗುಡ್ ನ್ಯೂಸ್: ವಿದ್ಯುತ್ ದರ ಇಳಿಕೆ ಮಾಡಿ ಸರ್ಕಾರ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ ಜನತೆಗೆ ಸರಕಾರ ಸಿಹಿ ಸುದ್ದಿ ನೀಡಿದ್ದು, ಹೊಸ ದರ ಪರಿಷ್ಕರಣೆ ಮಾಡಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (KERC) ವಿದ್ಯುತ್ ದರ ಇಳಿಕೆ ಮಾಡಿ ಆದೇಶ ಹೊರಡಿಸಿದೆ.

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ) ವತಿಯಿಂದ ಪ್ರತಿ ಯೂನಿಟ್‌ಗೆ 1ರೂ. 10 ಪೈಸೆ ಇಳಿಕೆ ಮಾಡಿ ಆದೇಶ ಹೊರಡಿಸಿದೆ. ಆದರೆ, ಒಂದು ಷರತ್ತು ವಿಧಿಸಲಾಗಿದ್ದು, ಈ ವಿದ್ಯುತ್ ದರ ಇಳಿಕೆ 100 ಯೂನಿಟ್‌ಗಿಂತ ಹೆಚ್ಚು ಬಳಕೆ ಮಾಡುವ ಗ್ರಾಹಕರಿಗೆ ಮಾತ್ರ ಅನ್ವಯ ಆಗುತ್ತದೆ.

ವಾಣಿಜ್ಯ ಬಳಕೆದಾರರಿಗೆ 1 ರೂಪಾಯಿ 25 ಪೈಸೆ ದರ ಇಳಿಕೆ ಮಾಡಲಾಗಿದೆ. ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳಿಗೆ ಯೂನಿಟ್​ಗೆ 40 ಪೈಸೆ ಕಡಿತ ಮಾಡಲಾಗಿದ್ದು, ಖಾಸಗಿ ಏತ ನೀರಾವರಿ ಬಳಕೆದಾರರಿಗೆ 2 ರೂಪಾಯಿ ಇಳಿಕೆ ಮಾಡಲಾಗಿದೆ. 100 ಯೂನಿಟ್​ಗಿಂತ ಹೆಚ್ಚು ಬಳಸುವವರಿಗೆ ಮಾತ್ರ ಹೊಸ ದರ ಮಾರ್ಚ್​ 1ರಿಂದಲೇ ಅನ್ವಯವಾಗಲಿದೆ.

ಎಲ್‌ಟಿ ಡೊಮೆಸ್ಟಿಕ್ ಸಂಪರ್ಕ: 100 ಯೂನಿಟ್‌ಗಳಿಗಿಂತ ಹೆಚ್ಚಿನ ಬಳಕೆಗಾಗಿ ಪ್ರತಿ ಯೂನಿಟ್‌ಗೆ 110 ಪೈಸೆಗಳಷ್ಟು (1 ರೂ. 10 ಪೈಸೆ) ವಿದ್ಯುತ್ ಶುಲ್ಕವನ್ನು ಕಡಿಮೆ ಮಾಡಲಾಗಿದೆ.

ಹೆಚ್‌ಟಿ ಕಮರ್ಷಿಯಲ್ ಸಂಪರ್ಕ: ವಿದ್ಯುತ್ ದರವು ಪ್ರತಿ ಯೂನಿಟ್‌ಗೆ 125 ಪೈಸೆ (1 ರೂ.25 ಪೈಸೆ) ಕಡಿಮೆ ಮಾಡಲಾಗಿದೆ. ಅಂದರೆ ಪ್ರತಿ ಕಿಲೋವೋಲ್ಟ್‌ ಆಂಪಿಯರ್‌ (ಕೆವಿಎ)ಗೆ ರೂ.10 ಕಡಿಮೆಯಾಗುತ್ತದೆ.

ಹೆಚ್‌ಟಿ ಇಂಡಸ್ಟ್ರಿಯಲ್ ಸಂಪರ್ಕ: ಪ್ರತಿ ಯೂನಿಟ್‌ಗೆ 50 ಪೈಸೆಗಳಷ್ಟು ಕಡಿಮೆ ಮಾಡಲಾಗಿದೆ. ಪ್ರತಿ ಕೆವಿಎಗೆ ರೂ.10 ಕಡಿಮೆಯಾಗಲಿದೆ.

ಹೆಚ್‌ಟಿ ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳ ಸಂಪರ್ಕ: ಪ್ರತಿ ಯೂನಿಟ್‌ಗೆ 40 ಪೈಸೆ ಕಡಿಮೆ ಮಾಡಲಾಗಿದೆ. ಪ್ರತಿ ಕೆವಿಎಗೆ ರೂ.10 ಕಡಿಮೆಯಾಗಲಿದೆ.

ಹೆಚ್‌ಟಿ ಖಾಸಗಿ ಏತ ನೀರಾವರಿ: ಪ್ರತಿ ಯೂನಿಟ್‌ಗೆ 200 ಪೈಸೆ (2 ರೂ.) ವಿದ್ಯುತ್ ದರ ಕಡಿತ ಮಾಡಲಾಗುತ್ತದೆ.

ಹೆಚ್‌ಟಿ ವಸತಿ ಅಪಾರ್ಟ್‌ಮೆಂಟ್‌ಗಳ ಸಂಪರ್ಕ: ಪ್ರತಿ ಪ್ರತಿ ಕಿಲೋವೋಲ್ಟ್‌ ಆಂಪಿಯರ್‌ (ಕೆವಿಎ)ಗೆ ರೂ.10 ಕಡಿಮೆಯಾಗುತ್ತದೆ.

ಎಲ್‌ಟಿ ಖಾಸಗಿ ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳು: ಪ್ರತಿ ಯೂನಿಟ್‌ಗೆ 50 ಪೈಸೆ ಕಡಿತ ಮಾಡಲಾಗುತ್ತದೆ.

ಎಲ್‌ಟಿ ಕೈಗಾರಿಕಾ ಸಂಸ್ಥೆಗಳು: ಪ್ರತಿ ಯೂನಿಟ್‌ಗೆ 100 ಪೈಸೆಗಳಷ್ಟು ದರವನ್ನು ಕಡಿಮೆ ಮಾಡಲಾಗುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!