June 25, 2026
Thursday, June 25, 2026
spot_img

ನಿರುದ್ಯೋಗಿಗಳಿಗೆ ರಾಜ್ಯ ಸರ್ಕಾರದಿಂದ ಗುಡ್‌ ನ್ಯೂಸ್‌ ; 72 ಸಾವಿರ ಹುದ್ದೆಗಳ ಭರ್ತಿಗೆ ಆದೇಶ; ‘2-4-6’ ಗಡುವು ಫಿಕ್ಸ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಸರ್ಕಾರಿ ಕೆಲಸದ ಆಕಾಂಕ್ಷಿಗಳಿಗೆ ಕೊನೆಗೂ ಬಹುದೊಡ್ಡ ಸುವರ್ಣ ಅವಕಾಶ ಒದಗಿಬಂದಿದೆ. ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಬರೋಬ್ಬರಿ 72 ಸಾವಿರ ಹುದ್ದೆಗಳ ಶೀಘ್ರ ನೇಮಕಾತಿಗೆ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ನೇಮಕಾತಿ ಪ್ರಕ್ರಿಯೆಯಲ್ಲಿ ಆಗುತ್ತಿದ್ದ ವರ್ಷಗಳ ವಿಳಂಬಕ್ಕೆ ಬ್ರೇಕ್ ಹಾಕಲು ಈ ಬಾರಿ ವಿಶೇಷ ಮಾಸ್ಟರ್ ಪ್ಲಾನ್ ಸಿದ್ಧಪಡಿಸಲಾಗಿದೆ.‌

ಏನಿದು ‘2 – 4 – 6’ ನೇಮಕಾತಿ ಸೂತ್ರ?

ನೇಮಕಾತಿ ಪ್ರಕ್ರಿಯೆಗಳು ಹಳ್ಳ ಹಿಡಿಯುವುದನ್ನು ತಪ್ಪಿಸಲು ಸರ್ಕಾರ ಜಾರಿಗೆ ತಂದಿರುವ ಕಟ್ಟುನಿಟ್ಟಿನ ಕಾಲಮಿತಿ ಸೂತ್ರದ ಇದಾಗಿದೆ.

2 ತಿಂಗಳ ಗಡುವು: ಅಧಿಸೂಚನೆ ಪ್ರಕಟವಾದ ಕೇವಲ 2 ತಿಂಗಳೊಳಗೆ ಅರ್ಜಿ ಸಲ್ಲಿಕೆ ಹಾಗೂ ಪರೀಕ್ಷಾ ಪ್ರಕ್ರಿಯೆಗಳು ಪೂರ್ಣಗೊಳ್ಳಬೇಕು.

4 ತಿಂಗಳ ಗಡುವು: ಪರೀಕ್ಷೆ ಮುಗಿದ 4 ತಿಂಗಳ ಒಳಗಾಗಿ ಫಲಿತಾಂಶ ಹಾಗೂ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆಯಾಗಬೇಕು.

6 ತಿಂಗಳ ಗಡುವು: ಕೇವಲ 6 ತಿಂಗಳ ಒಳಗೆ ದಾಖಲಾತಿ ಪರಿಶೀಲನೆ ಮುಗಿಸಿ ಅಭ್ಯರ್ಥಿಗಳ ಕೈಗೆ ನೇಮಕಾತಿ ಆದೇಶ ಪತ್ರ ಸಿಗಲೇಬೇಕು.

ಯಾವ ಇಲಾಖೆಗಳಲ್ಲಿ ಅತಿ ಹೆಚ್ಚು ಹುದ್ದೆಗಳು ಭರ್ತಿಯಾಗಲಿವೆ?

ಈ ಮೆಗಾ ನೇಮಕಾತಿ ಅಭಿಯಾನದ ಅಡಿಯಲ್ಲಿ ಪ್ರಮುಖವಾಗಿ ಶಿಕ್ಷಣ ಇಲಾಖೆ, ಗೃಹ ಇಲಾಖೆ, ಆರೋಗ್ಯ ಇಲಾಖೆ, ಕಂದಾಯ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಆದ್ಯತೆಯ ಮೇರೆಗೆ ತುಂಬಲು ಸೂಚಿಸಲಾಗಿದೆ.

ಇದನ್ನೂ ಓದಿ:

ನಿಯಮ ಉಲ್ಲಂಘಿಸಿದರೆ ಅಧಿಕಾರಿಗಳ ತಲೆದಂಡ!

ಕೆಪಿಎಸ್‌ಸಿ ಮತ್ತು ಕೆಇಎ ಸೇರಿದಂತೆ ಎಲ್ಲಾ ನೇಮಕಾತಿ ಮಂಡಳಿಗಳು ಈ ‘2-4-6’ ಸೂತ್ರವನ್ನು ಕಡ್ಡಾಯವಾಗಿ ಪಾಲಿಸಬೇಕು. ನಿಗದಿತ 6 ತಿಂಗಳ ಅವಧಿಯಲ್ಲಿ ಪ್ರಕ್ರಿಯೆ ಮುಗಿಸದಿದ್ದರೆ ಸಂಬಂಧಪಟ್ಟ ಇಲಾಖೆಯ ಉನ್ನತ ಅಧಿಕಾರಿಗಳ ವಿರುದ್ಧವೇ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಸರ್ಕಾರ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. ಇದರಿಂದಾಗಿ ಪರೀಕ್ಷೆಗಾಗಿ ವರ್ಷಗಳಿಂದ ಕಾಯುತ್ತಿದ್ದ ಯುವ ಜನತೆಯಲ್ಲಿ ಭಾರಿ ಸಂತಸ ಮೂಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !