October 14, 2026
Wednesday, October 14, 2026
spot_img

ವೈದ್ಯಕೀಯ ಶಿಕ್ಷಣದ ಕನಸು ಕಾಣೋರಿಗೆ ಗುಡ್ ನ್ಯೂಸ್: ಕರ್ನಾಟಕಕ್ಕೆ 1,122 ಹೊಸ ಮೆಡಿಕಲ್ ಸೀಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣ ಕ್ಷೇತ್ರ ಮತ್ತಷ್ಟು ವಿಸ್ತಾರವಾಗುತ್ತಿದ್ದು, ವೈದ್ಯರಾಗಬೇಕೆಂಬ ಕನಸು ಕಾಣುತ್ತಿರುವ ವಿದ್ಯಾರ್ಥಿಗಳಿಗೆ ದೊಡ್ಡ ಅವಕಾಶ ದೊರೆಯಲಿದೆ.

ಕರ್ನಾಟಕಕ್ಕೆ ಹೆಚ್ಚುವರಿಯಾಗಿ 1,122 ಮೆಡಿಕಲ್ ಸೀಟುಗಳು ಮಂಜೂರಾಗಿವೆ ಎಂದು ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ.

ವಿಕಾಸಸೌಧದಲ್ಲಿ ಮಾತನಾಡಿದ ಸಚಿವರು, ದೇಶದಲ್ಲೇ ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ ಎಂದು ಹೇಳಿದ್ದಾರೆ. ಹೊಸ ಸೀಟುಗಳು ಕೊಪ್ಪಳ, ಗದಗ, ಚಾಮರಾಜನಗರ, ಕಾರವಾರ, ಹಾವೇರಿ ಸೇರಿದಂತೆ ಹಲವು ಜಿಲ್ಲೆಗಳಿಗೆ ಹಂಚಿಕೆಯಾಗಲಿವೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:

ಪದವಿಪೂರ್ವ ವೈದ್ಯಕೀಯ ಸೀಟುಗಳಿಗೆ ಕೇಂದ್ರ ಸರ್ಕಾರದಿಂದ 495 ಕೋಟಿ ರೂಪಾಯಿ ಅನುದಾನ ದೊರೆಯಲಿದ್ದು, ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣಕ್ಕೆ 541 ಕೋಟಿ ರೂಪಾಯಿ ಮಂಜೂರಾಗಿದೆ. ಒಟ್ಟಾರೆ ರಾಜ್ಯಕ್ಕೆ ಸುಮಾರು 1,090 ಕೋಟಿ ರೂಪಾಯಿ ನೆರವು ಸಿಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮೇ 15ರಂದು ಅಂತಿಮ ಅನುಮೋದನೆ ನೀಡಿದೆ. ಒಂದು ರಾಜ್ಯಕ್ಕೆ ಸಾವಿರಕ್ಕೂ ಹೆಚ್ಚು ಮೆಡಿಕಲ್ ಸೀಟು ಸಿಕ್ಕಿರುವುದು ದೊಡ್ಡ ಸಾಧನೆ ಎಂದು ಸಚಿವರು ಸಂತಸ ವ್ಯಕ್ತಪಡಿಸಿದರು.

ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದ್ದಾರೆ.

Must Read