ವಾಹನ ಮಾಲೀಕರಿಗೆ ಗುಡ್ ನ್ಯೂಸ್: ಬಾಕಿ ದಂಡದ ಮೊತ್ತದಲ್ಲಿ ಶೇ.50ರಷ್ಟು ರಿಯಾಯಿತಿ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಸರ್ಕಾರ ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಮಾಲೀಕರಿಗೆ ಗುಡ್ ನ್ಯೂಸ್ ನೀಡಿದ್ದು, ಟ್ರಾಫಿಕ್ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50 ರಷ್ಟು ರಿಯಾಯಿತಿ ಘೋಷಿಸಿ ಆದೇಶಿಸಿದೆ.

ಆಗಸ್ಟ್ 23 ರಿಂದ ಸೆಪ್ಟೆಂಬರ್ 9ರವರೆಗೆ ದಂಡದ ಅರ್ಧದಷ್ಟು ಹಣ ಪಾವತಿಸಲು ವಾಹನ ಸವಾರರಿಗೆ ಅವಕಾಶ ಕಲ್ಪಿಸಲಾಗಿದೆ.

ಈ ಕುರಿತು ರಾಜ್ಯ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ಪುಷ್ಪ ವಿ.ಎಸ್ ಅವರು ಅಧಿಕೃತ ಆದೇಶ ಹೊರಡಿಸಿದ್ದು, ಆಗಸ್ಟ್ 23 ರಿಂದ ಸೆಪ್ಟೆಂಬರ್ 12ರವರೆಗೆ ಶೇ. 50 ರಷ್ಟು ದಂಡ ಪಾವತಿ ಮಾಡಲು ಅವಕಾಶ ನೀಡಲಾಗಿದೆ.

ಪೊಲೀಸ್‌ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ 2023ರ ಫೆಬ್ರವರಿ 11ರ ಒಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಮತ್ತೊಮ್ಮೆ ಶೇ. 50 ರಷ್ಟು ರಿಯಾಯಿತಿ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಬಹಳ ವರ್ಷಗಳಿಂದ ಟ್ರಾಫಿಕ್ ದಂಡ ಕಟ್ಟದೇ ಹಾಗೇ ಬಾಕಿ ಉಳಿಸಿಕೊಂಡವರಿಗೆ ಈ ಆಫರ್ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!