ವಾಹನ ಮಾಲೀಕರಿಗೆ ಗುಡ್ ನ್ಯೂಸ್: HSRP ನಂಬರ್‌ ಪ್ಲೇಟ್‌ ಅಳವಡಿಕೆ ಗಡುವು 3 ತಿಂಗಳು ವಿಸ್ತರಣೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಸಂಖ್ಯೆ ಫಲಕ (HSRP Number Plate) ಕಡ್ಡಾಯವಾಗಿ ಅಳವಡಿಸಬೇಕೆಂಬ ಗಡುವನ್ನು ಸೆಪ್ಟೆಂಬರ್‌ 15ರವರೆಗೆ ವಿಸ್ತರಣೆ ಮಾಡಲಾಗಿದೆ. ಜುಲೈ 4ರವರೆಗೆ ವಿಸ್ತರಣೆ ಮಾಡಲಾಗಿದ್ದ ಅವಧಿಯನ್ನು ಈಗ ರಾಜ್ಯ ಸರ್ಕಾರವು ಮತ್ತೆ ವಿಸ್ತರಣೆ ಮಾಡಿದೆ. ಹೀಗಾಗಿ ನಾನಾ ತಾಂತ್ರಿಕ ಕಾರಣಗಳಿಂದಾಗಿ ಇನ್ನೂ ನಂಬರ್​ಪ್ಲೇಟ್​ ಅಳವಡಿಸದ ವಾಹನಗಳ ಮಾಲೀಕರಿಗೆ ನೆಮ್ಮದಿ ಸಿಕ್ಕಿದೆ.

ಹೊಸ ನಂಬರ್​ ಪ್ಲೇಟ್ ಅಳವಡಿಸದ ವಾಹನ ಮಾಲೀಕರ ವಿರುದ್ಧ ಯಾವುದೇ ಕಠಿಣ ಕೈಗೊಳ್ಳಬಾರದು ಎಂದು ಹೈಕೋರ್ಟ್‌ ಮೇ 21ರಂದು ಹೊರಡಿಸಿದ್ದ ಆದೇಶ ಜುಲೈ 4ರವರೆಗೆ ವಿಸ್ತರಣೆಯಾಗಿರುವುದರಿಂದ ವಾಹನ ಮಾಲೀಕರಿಗೆ ತೊಂದರೆ ತಪ್ಪಿತ್ತು. ಇದೀಗ ಸೆಪ್ಟೆಂಬರ್‌ 15ರವರೆಗೆ ಗಡುವನ್ನು ವಿಸ್ತರಣೆ ಮಾಡಲಾಗಿದೆ.

ಸೆ.15ರ ಬಳಿಕ ವಿಸ್ತರಣೆ ಇಲ್ಲ
ಇನ್ನು ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಕೆಗೆ ಸೆಪ್ಟೆಂಬರ್‌ 15ರವರೆಗೆ ಕಾಲಾವಕಾಶ ನೀಡಲಾಗಿದೆ. ಸೆಪ್ಟೆಂಬರ್‌ 15ರ ಬಳಿಕ ರಾಜ್ಯ ಸರ್ಕಾರವು ಯಾವುದೇ ಕಾರಣಕ್ಕೂ ಗಡುವನ್ನು ವಿಸ್ತರಣೆ ಮಾಡುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿ 2019ರ ಏಪ್ರಿಲ್‌ 1ಕ್ಕಿಂತ ಮುನ್ನ ನೋಂದಣಿಯಾದ ಎಲ್ಲ ಮಾದರಿಯ ವಾಹನಗಳಿಗೆ ಮೂಲ ಉಪಕರಣ ತಯಾರಕ (ಓಇಎಂ) ಅಧಿಕೃತ ಡೀಲರ್‌ಗಳ ಮೂಲಕ ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳಲು ರಾಜ್ಯ ಸರಕಾರ 2023ರ ಆಗಸ್ಟ್‌ 17ರಂದು ಅಧಿಸೂಚನೆ ಹೊರಡಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!