ಬಿಬಿಎಂಪಿ ವ್ಯಾಪ್ತಿಯ ಹಳ್ಳಿಗಳಿಗೆ ಗುಡ್‌ನ್ಯೂಸ್‌, ಶೀಘ್ರದಲ್ಲೇ ಮನೆತುಂಬಲಿದ್ದಾಳೆ ʼಕಾವೇರಿʼ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಹತ್ತಾರು ವರ್ಷಗಳಿಂದ ಕಾವೇರಿ ನೀರಿಗಾಗಿ ಕಾದು ಕುಳಿತಿದ್ದ ಬೆಂಗಳೂರು ಹೊರವಲಯದ ಜನಕ್ಕೆ ಕೊನೆಗೂ ಗುಡ್ ನ್ಯೂಸ್ ಸಿಕ್ಕಿದೆ. ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ಕಾವೇರಿ ಹರಿಯಲು ಮೂಹೂರ್ತ ಫಿಕ್ಸ್ ಆಗಿದೆ.

ಇದೇ ಅಕ್ಟೋಬರ್‌ 16ರಂದು ಕಾವೇರಿ 5ನೇ ಹಂತದ ಯೋಜನೆಗೆ ಚಾಲನೆ ಸಿಗಲಿದ್ದು, ಬೆಂಗಳೂರು ಹೊರವಲಯದ ಹಳ್ಳಿ ನಿವಾಸಿಗಳ ಬಹುದಿನಗಳ ಕನಸು ನನಸಾಗಲಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ದಸರಾ ಉತ್ಸವ ಮುಗಿದ ಬಳಿಕ ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ಕಾವೇರಿ ನೀರು ಹರಿಯಲಿದೆ.

2019 ರಲ್ಲಿ ಕಾವೇರಿ 5ನೇ ಹಂತ ಯೋಜನೆ ಕಾಮಗಾರಿ ಆರಂಭ ಮಾಡಿದ್ದ ಜಲಮಂಡಳಿ, ಇದೀಗ ಸುಮಾರು 5,500 ಕೋಟಿ ರೂ. ವೆಚ್ಚದಲ್ಲಿ ಯೋಜನೆ ಕಾಮಗಾರಿ ಮುಗಿಸಿದೆ. ಅ.16ರಂದು ಟಿಕೆ ಹಳ್ಳಿಯ ಜಲಮಂಡಳಿ ಆವರಣದಲ್ಲಿ ಸಿಎಂ, ಡಿಸಿಎಂ ಕಾವೇರಿ 5ನೇ ಹಂತ ಯೋಜನೆಗೆ ಚಾಲನೆ ನೀಡಲಿದ್ದಾರೆ.

ಈಗಾಗಲೇ ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳ ವ್ಯಾಪ್ತಿಯಲ್ಲಿ ಒಟ್ಟು 5 ಲಕ್ಷ ಸಂಪರ್ಕ ನೀಡಲು ಉದ್ದೇಶಿಸಲಾಗಿದೆ. ಈಗಾಗಲೇ 50 ಸಾವಿರಕ್ಕೂ ಹೆಚ್ಚು ನಿವಾಸಿಗಳು ನೀರಿನ ಸಂಪರ್ಕ ಹೊಂದಿದ್ದಾರೆ. ಮೊದಲ ಹಂತದಲ್ಲಿ 170 ಎಮ್‌ಎಲ್‌ಡಿ ನೀರು ಪೂರೈಕೆಯಾಗಲಿದ್ದು, ಉಳಿದ ನೀರನ್ನು ಹಂತಹಂತವಾಗಿ ಪೂರೈಸಲು ಜಲ ಮಂಡಳಿ ನಿರ್ಧರಿಸಿದೆ. ಯಶವಂತಪುರ, ದಾಸರಹಳ್ಳಿ, ಬೊಮ್ಮನಹಳ್ಳಿ, ಮಹಾದೇವಪುರ, ಆರ್.ಆರ್ ನಗರ ವಿಧಾನಸಭಾ ಕ್ಷೇತ್ರದ ಹಳ್ಳಿಗಳಿಗೆ ಕಾವೇರಿ ನೀರು ಹರಿಯಲಿದೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!