ಮಹಿಳೆಯರಿಗೆ ಗುಡ್ ನ್ಯೂಸ್ : ಮೊಬೈಲ್ ನಲ್ಲಿ ‘ಆಧಾರ್ ಕಾರ್ಡ್’ ತೋರಿಸಿ ಪ್ರಯಾಣಿಸಲು ಅವಕಾಶ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮಹಿಳೆಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಮೊಬೈಲ್ ನಲ್ಲಿ ‘ಆಧಾರ್ ಕಾರ್ಡ್’ ತೋರಿಸಿ ಪ್ರಯಾಣಿಸಲು ಸಾರಿಗೆ ಸಂಸ್ಥೆ ಅವಕಾಶ ನೀಡಿ ಆದೇಶ ಹೊರಡಿಸಿದೆ.

ಆದೇಶದಲ್ಲಿ ಉಲ್ಲೇಖ ಮಾಡಿರುವಂತೆ ಕರ್ನಾಟಕ ಸರ್ಕಾರವು ‘ಶಕ್ತಿ ಯೋಜನೆಯಡಿ ರಾಜ್ಯದ ಎಲ್ಲಾ ಮಹಿಳಾ ಪ್ರಯಾಣಿಕರಿಗೆ ನಿಗಮದ ವಾಹನಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಸಾಮಾನ್ಯ ಸ್ಥಾಯಿ ಆದೇಶ ಸಂಖ್ಯೆ: 179 ದಿನಾಂಕ: 07.06.2023 ರಲ್ಲಿ ಅವಕಾಶ ಕಲ್ಪಸಿತ್ತು. ಮುಂದುವರೆದ ಉಲ್ಲೇಖಿತ ಪತ್ರ-ತಿರ ತಿದ್ದುಪಡಿ ಆದೇಶದಲ್ಲಿ ಸದರಿ ಉಚಿತ ಪ್ರಯಾಣಕ್ಕಾಗಿ ಮಹಿಳಾ ಪ್ರಯಾಣಿಕರು ಮೂಲನಕಲು/ಡಿಜಿಲಾಕರ್ ಹಾರ್ಡ್ ಮತ್ತು ಸಾಫ್ಟ್ ಕಾಪಿ) ಮಾದರಿಯಲ್ಲಿ ತೋರಿಸಿದಲ್ಲಿ ಹಾಜರುಪಡಿಸಿದಲ್ಲಿ ಪ್ರಯಾಣಕ್ಕೆ ಅವಕಾಶ ಕಲ್ಪಿಸಲು ತಿಳಿಸಲಾಗಿದೆ.

ಮಹಿಳಾ ಪ್ರಯಾಣಿಕರು ಮೊಬೈಲ್‌ನಲ್ಲಿ ಅಧಿಕೃತ ಗುರುತಿನ ಚೀಟಿ ತೋರಿಸಿದರೂ ಸಹ ಮೊಬೈಲ್‌ನಲ್ಲಿನ ಗುರುತಿನ ಚೀಟಿ ನಡೆಯುವುದಿಲ್ಲ ಎಂದು ಕೆಲವು ನಿರ್ವಾಹಕರು ಅನಾವಶ್ಯಕವಾಗಿ ಮಹಿಳಾ ಪ್ರಯಾಣಿಕರಿಗೆ ತೊಂದರೆಯುಂಟು ಮಾಡುತ್ತಿರುವ ಬಗ್ಗೆ ಪದೇ ಪದೇ ದೂರುಗಳು ಕೇಳಿ ಬರುತ್ತಿರುವುದಾಗಿ, ಈ ಹಿನ್ನೆಲೆಯಲ್ಲಿ ಮಹಿಳಾ ಪ್ರಯಾಣಿಕರು ಮೊಬೈಲ್ ನಲ್ಲಿ ಉಲ್ಲೇಖಿತ ಆದೇಶಗಳಲ್ಲಿ ತಿಳಿಸಿರುವಂತೆ ತೋರಿಸುವ ಯಾವುದಾದರೂ ಒಂದು ಅಧಿಕೃತ ಗುರುತಿನ ಚೀಟಿಯನ್ನು ಪರಿಗಣಿಸಿ ಶೂನ್ಯ ಮೊತ್ತದ ಮಹಿಳಾ ಟಿಕೆಟ್ ವಿತರಿಸಲು ಮತ್ತೊಮ್ಮೆ ಎಲ್ಲಾ ನಿರ್ವಾಹಕರಿಗೆ ತಿಳುವಳಿಕೆ ನೀಡಲು ಹಾಗೂ ಮಹಿಳಾ ಪ್ರಯಾಣಿಕರಿಗೆ ಉಚಿತ ಪ್ರಯಾಣಕ್ಕೆ ಆಡಚಣೆಯಾಗದಂತೆ ಹಾಗೂ ದೂರುಗಳಿಗೆ ಆಸ್ಪದ ನೀಡದಂತೆ ಕ್ರಮ ವಹಿಸುವಂತೆ ಉಲ್ಲೇಖ-4 ರ ಪತ್ರದಲ್ಲಿ ಕ.ರಾ.ರ.ಸಾ.ನಿಗಮದ ಬೆಂಗಳೂರು ಕೇಂದ್ರ ಕಚೇರಿಯ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!