October 16, 2026
Friday, October 16, 2026
spot_img

ಬಂಗಾಳದ ಮಹಿಳೆಯರಿಗೆ ಗುಡ್ ನ್ಯೂಸ್: ಜೂನ್ 1 ರಿಂದ ಸರಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಶ್ಚಿಮ ಬಂಗಾಳದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಬಿಜೆಪಿ ಸರಕಾರವು ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರಲು ನಿರ್ಧರಿಸಿದ್ದು, ಇದೀಗ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆಯನ್ನು ಜೂನ್ 1 ರಿಂದಲೇ ಜಾರಿಗೆ ಬರಲಿದೆ ಎಂದು ಸಿಎಂ ಸುವೇಂದು ಅಧಿಕಾರಿ ನೇತೃತ್ವದ ಸರ್ಕಾರ ಶುಕ್ರವಾರ ಘೋಷಿಸಿದೆ.

ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್

ಈ ಕುರಿತು ಮೇ 21 ರಂದು ರಾಜ್ಯ ಸಾರಿಗೆ ಇಲಾಖೆ ಅಧಿಸೂಚನೆ ಹೊರಡಿಸಿದ್ದು, ಎಲ್ಲಾ ರಾಜ್ಯ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಪ್ರಕಟಿಸಿದೆ. ಸಂಬಂಧಪಟ್ಟ ಬಿಡಿಒ ಅಥವಾ ಎಸ್‌ಡಿಒ ಕಚೇರಿಗಳ ಮೂಲಕ ಅರ್ಜಿ ಸಲ್ಲಿಸಿದ ನಂತರ ಎಲ್ಲಾ ಅರ್ಹ ಮಹಿಳೆಯರಿಗೆ ಕ್ಯೂಆರ್ ಕೋಡ್, ಛಾಯಾಚಿತ್ರ ಮತ್ತು ಫಲಾನುಭವಿ ವಿವರಗಳೊಂದಿಗೆ ಸ್ಮಾರ್ಟ್ ಕಾರ್ಡ್ ನೀಡಲಾಗುತ್ತದೆ ಎಂದು ತಿಳಿಸಿದೆ.

ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್, ಚಾಲನಾ ಪರವಾನಗಿ, ಪ್ಯಾನ್ ಕಾರ್ಡ್, ಪಾಸ್‌ಪೋರ್ಟ್ ಅಂತಹ ಗುರುತಿನ ಪೂರಕ ದಾಖಲೆಗಳ ಆಧಾರದ ಮೇಲೆ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ನೀಡಲಾಗುತ್ತದೆ ಎಂದು ಸಾರಿಗೆ ಇಲಾಖೆ ಹೇಳಿದೆ.

ಪ್ರಮುಖ ದಾಖಲೆ ಮೂಲಕ ಪ್ರಯಾಣಕ್ಕೆ ಅವಕಾಶ

ಸ್ಮಾರ್ಟ್ ಕಾರ್ಡ್‌ಗಳನ್ನು ನೀಡುವವರೆಗೆ, ಮಹಿಳಾ ಪ್ರಯಾಣಿಕರು ತಮ್ಮ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ ಸಹಿತ ಸರ್ಕಾರ ನೀಡಿದ ಸೇವಾ ಗುರುತಿನ ಚೀಟಿಗಳಂತಹ ಮಾನ್ಯ ಫೋಟೋ ಗುರುತಿನ ದಾಖಲೆಗಳನ್ನು ಹಾಜರುಪಡಿಸುವ ಮೂಲಕ ಉಚಿತ ಸೌಲಭ್ಯವನ್ನು ಪಡೆಯಲು ಅನುಮತಿಸಲಾಗುವುದು ಎಂದು ತಿಳಿಸಲಾಗಿದೆ.

Must Read