ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಜಾರಿಗೊಳಿಸಿರುವ ಶಕ್ತಿ ಯೋಜನೆ ಅಡಿಯಲ್ಲಿ ನಿನ್ನೆ ಒಂದೇ ದಿನ 5,71,023 ಮಹಿಳೆಯರು ಉಚಿತವಾಗಿ ಸಾರಿಗೆ ಬಸ್ಸುಗಳಲ್ಲಿ ಪ್ರಯಾಣಿಸಿದ್ದರು. ಇದು ಬರೋಬ್ಬರಿ 1,40,22,878 ರೂ ಪ್ರಯಾಣದ ಮೌಲ್ಯವಾಗಿದೆ .
ಮಹಿಳಾ ಪ್ರಯಾಣಿಕರು ತಮ್ಮ ಗುರುತಿನ ಚೀಟಿ ತೋರಿಸುವ ಮೂಲಕ ಪ್ರಯಾಣ ಮಾಡಿದ್ದೂ, ಆದ್ರೆ ಕೆಲವೆಡೆ ಕೆಲ ನಿರ್ವಾಹಕರೊಂದಿಗೆ ನಕಲಿ ಗುರುತಿನ ಚೀಟಿಯನ್ನು ತೋರಿಸಿಯೂ ಮಹಿಳಾ ಪ್ರಯಾಣಿಕರು ಪ್ರಯಾಣಕ್ಕೆ ಅನುಮತಿ ಕೋರಿದಾಗ ನಿರಾಕರಿಸಿ, ಗಲಾಟೆಯಾದಂತ ಘಟನೆಗಳು ಅಲ್ಲಲ್ಲಿ ವರದಿಯಾಗಿದ್ದವು.
ಇದೀಗ ಈ ಕಾರಣ ನಕಲಿ ಐಟಿ ತೋರಿಸಿ, ಉಚಿತವಾಗಿ ಸಾರಿಗೆ ಬಸ್ಸುಗಳಲ್ಲಿ ಪ್ರಯಾಣಿಸಲು ಕೆ ಎಸ್ ಆರ್ ಟಿ ಸಿ ಅವಕಾಶ ಮಾಡಿಕೊಟ್ಟಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು ತಿದ್ದುಪಡಿ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ರಾಜ್ಯದ ಮಹಿಳೆಯರಿಗೆ ನಾಲ್ಕು ನಿಗಮಗಳ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಸಂಬಂಧ ಶಕ್ತಿ ಯೋಜನೆಯ ಅಡಿಯಲ್ಲಿ ನಿರ್ದೇಶನ ನೀಡಲಾಗಿತ್ತು ಮಹಿಳೆಯರು ಕರ್ನಾಟಕ ರಾಜ್ಯದ ನಿವಾಸಿಗಳೆಂಬ ಪುರಾವೆಗಾಗಿ ತೋರಿಸಬೇಕಾದ ದಾಖಲಾತಿಗಳಲ್ಲಿ ಮೂಲ ಗುರುತಿನ ಚೀಟಿ ಅಥವಾ ಡಿಜಿಲಾಕರ್ ಮುಖಾಂತರ ಹಾಜರುಪಡಿಸಬೇಕಾಗಿರುತ್ತದೆ ಎಂದು ತಿಳಿಸಲಾಗಿತ್ತು .ಈ ನಡುವೆ ಮಹಿಳಾ ಪ್ರಯಾಣಿಕರ ಅನುಕೂಲಕ್ಕಾಗಿ ಆ ಆದೇಶದಲ್ಲಿ ನಮೂದಿಸಿರುವ ಗುರುತಿನ ಚೀಟಿಗಳ ನಕಲು ಪ್ರತಿಯನ್ನು ಸಹ ಮಾನ್ಯ ಮಾಡಲು ನಿರ್ಧರಿಸಿದೆ.
ಆದುದರಿಂದ ಮಹಿಳಾ ಪ್ರಯಾಣಿಕರು ತಮ್ಮ ಪ್ರಯಾಣದ ಸಮಯದಲ್ಲಿ ಗುರುತಿನ ಚೀಟಿಗಳ ಮೂಲ, ನಕಲು, ಡಿಜಿಲಾಕರ್ ( ಹಾರ್ಡ್ ಮತ್ತು ಸಾಫ್ಟ್ ಕಾಪಿ ) ಮಾದರಿಯಲ್ಲಿ ಹಾಜರುಪಡಿಸಿ ಪ್ರಯಾಣಿಸಲು ಅನುಮತಿಸಿ ಆದೇಶಿಸಿದ್ದಾರೆ.