March 13, 2026
Friday, March 13, 2026
spot_img

ಯಶ್ ಅಭಿಮಾನಿಗಳಿಗೆ ಗುಡ್ ನ್ಯೂಸ್: ಟಾಕ್ಸಿಕ್ ಸಿನಿಮಾ ತಂಡದಿಂದ ಬಿಗ್ ಅಪ್ಡೇಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಯಶ್ ಅಭಿನಯದ ಟಾಕ್ಸಿಕ್ ಸಿನಿಮಾಗಾಗಿ ಕಾಯುತ್ತಿರುವ ಅಭಿಮಾನಿಗಳಿಗೆ ಇದೀಗ ಒಂದು ಸಿಹಿ ಸುದ್ದಿ ಇದ್ದು, ಮಾರ್ಚ್ 19ಕ್ಕೆ ಟಾಕ್ಸಿಕ್ ಸಿನಿಮಾ ಬಿಡುಗಡೆಯಾಗಲಿದೆ ಎಂದು ಚಿತ್ರ ತಂಡ ಹೇಳಿದೆ.

ಸಿನಿಮಾದ ಬಹುತೇಕ ಕೆಲಸಗಳು ಮುಗಿದೆ. ಮಾರ್ಚ್ 19ಕ್ಕೆ ಸಿನಿಮಾ ಬಿಡುಗಡೆಯಾಗುತ್ತಿದ್ದರೆ, ಫೆಬ್ರವರಿ ಕೊನೆಯವಾರದಲ್ಲಿ ಟಾಕ್ಸಿಕ್ ಸಿನಿಮಾ ಟೀಸರ್ ಬಿಡುಗಡೆಯಾಗಲಿದೆ. ಫೆಬ್ರವರಿ ಅಂತ್ಯದಲ್ಲಿ ಮತ್ತೆ ಟಾಕ್ಸಿಕ್ ಅಬ್ಬರ ದೇಶ ವಿದೇಶದಲ್ಲಿ ನಡೆಯಲಿದೆ.

ಟ್ರೇಲರ್ ಮೇಲೆ ಇದೀಗ ಎಲ್ಲರ ಕುತೂಹಲ ನೆಟ್ಟಿದೆ. ಯಶ್ ಟಾಕ್ಸಿಕ್ ಸಿನಿಮಾದ ಮೊದಲ ಟೀಸರ್ ಭಾರಿ ಧೂಳೆಬ್ಬಿಸಿತ್ತು. ಇದೀಗ ಟೀಸರ್ ಹಾಗೂ ಟ್ರೇಲರ್ ಎರಡೂ ಬಿಡುಗಡೆಗೆ ಸಜ್ಜಾಗಿದ್ದು, ಅಭಿಮಾನಿಗಳ ಸಂಭ್ರಮ ಡಬಲ್ ಆಗಿದೆ.

ಟಾಕ್ಸಿಕ್ ಸಿನಿಮಾದಲ್ಲಿ ಐವರು ನಾಯಕಿಯರು ಕಾಣಿಸಿಕೊಂಡಿದ್ದಾರೆ. ಎಲ್ಲರೂ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ. ನಯನ್ ತಾರಾ, ರುಕ್ಮಿಣಿ ವಸಂತ್, ಕಿಯಾರ ಅಡ್ವಾಣಿ, ಹುಮಾ ಖುರೇಷಿ ಹಾಗೂ ತಾರಾ ಸುತಾರಿಯಾ ಸೇರಿ ಐವರು ಈ ಸಿನಿಮಾದಲ್ಲಿದ್ದಾರೆ.

ಈ ಮೊದಲು ಟಾಕ್ಸಿಕ್ ಸಿನಿಮಾ ರಿಲೀಸ್ ಮುಂದೂಡಲಾಗುತ್ತಿದೆ ಅನ್ನೋ ಮಾತುಗಳು ಕೇಳಿಬಂದಿತ್ತು. ಇದೇ ದಿನ ಧುರಧರ್ 2 ಪಾರ್ಟ್ ಬಿಡುಗಡೆಯಾಗಲಿದೆ. ಆದರೆ ಮುಂದೂಡಿಕೆ ಕುರಿತು ಊಹಾಪೋಹಕ್ಕೆ ಚಿತ್ರ ತಂಡ ಸ್ಪಷ್ಟನೆ ನೀಡಿದೆ. ಟಾಕ್ಸಿಕ್ ಮೊದಲೇ ನಿರ್ಧರಿಸಿದಂತೆ ಮಾರ್ಚ್ 19ಕ್ಕೆ ಬಿಡುಗಡೆಯಾಗಲಿದೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟನೆ ನೀಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !