ಸಿಎಂ ಯೋಗಿ ಆದಿತ್ಯನಾಥ್ ಸರಕಾರದಿಂದ ಗುಡ್ ನ್ಯೂಸ್: ಪ್ರತಿ ಕುಟುಂಬಕ್ಕೆ ಉಚಿತ ಗ್ಯಾಸ್ ಸಿಲಿಂಡರ್ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ರಾಜ್ಯ ಸರ್ಕಾರ ದೀಪಾವಳಿಯಂದು ಬಡ ಕುಟುಂಬಗಳಿಗೆ ಉಡುಗೊರೆ ನೀಡಲು ಸಿದ್ಧತೆ ನಡೆಸುತ್ತಿದೆ.
ದೀಪಾವಳಿ ಸಮಯ ಬಡ ಕುಟುಂಬಗಳಿಗೆ ಉಚಿತ ಅಡುಗೆ ಅನಿಲವನ್ನು ಒದಗಿಸುವುದಾಗಿ ಸರ್ಕಾರ ಘೋಷಿಸಿದೆ. ಪ್ರತಿ ಕುಟುಂಬಕ್ಕೆ ಒಂದು ಸಿಲಿಂಡರ್’ನ್ನ ಉಚಿತವಾಗಿ ನೀಡಲಾಗುವುದು ಎಂದು ಹೇಳಿವೆ.
ವಾಸ್ತವವಾಗಿ, ಬಿಜೆಪಿ 2022ರ ವಿಧಾನಸಭಾ ಚುನಾವಣೆಯಲ್ಲಿ ತನ್ನ ನಿರ್ಣಯ ಪತ್ರದಲ್ಲಿ ದೀಪಾವಳಿ ಮತ್ತು ಹೋಳಿಯಂದು ಉಚಿತ ಗ್ಯಾಸ್ ಸಿಲಿಂಡರ್‍ಗಳನ್ನು ನೀಡುವುದಾಗಿ ಭರವಸೆ ನೀಡಿತ್ತು. ಇದೀಗ ಆ ಭರವಸೆ ಈಡೇರುವ ಸನಿಹಕ್ಕೆ ಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!