April 13, 2026
Monday, April 13, 2026
spot_img

ಇರಾನ್‌ನಿಂದ ಸಿಕ್ಕಿತು ಸಿಹಿ ಸುದ್ದಿ: ಹಾರ್ಮುಜ್ ಜಲಸಂಧಿ ದಾಟಿದ ಭಾರತ ಧ್ವಜ ಹೊತ್ತ ಇಂಧನ ಟ್ಯಾಂಕರ್‌!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಧ್ಯಪ್ರಾಚ್ಯದಲ್ಲಿನ ಸಂಘರ್ಷದ ಮಧ್ಯೆ ಕಚ್ಚಾ ತೈಲ ಮತ್ತು ಅನಿಲ ಹೊತ್ತ ಎರಡು ಭಾರತೀಯ ಹಡಗುಗಳು ಹಾರ್ಮುಜ್ ಜಲಸಂಧಿಯನ್ನು ದಾಟಿ ಬಂದಿದೆ.

ಇರಾನ್ ಮತ್ತು ಭಾರತದ ನಡುವೆ ನಡೆದ ಹಲವಾರು ಸುತ್ತಿನ ಮಾತುಕತೆಗಳ ನಂತರ ಇರಾನ್ ಭಾರತೀಯ ಹಡಗುಗಳಿಗೆ ಹಾರ್ಮುಜ್ ಜಲಸಂಧಿಯನ್ನು ದಾಟಲು ಅವಕಾಶ ನೀಡಿತ್ತು. ಇದರ ಬೆನ್ನಲ್ಲೇ ಎರಡು ಭಾರತೀಯ ಹಡಗುಗಳು ಹಾರ್ಮುಜ್ ಜಲಸಂಧಿಯನ್ನು ದಾಟಿದೆ.

ಇಂದು ಭಾರತದಲ್ಲಿನ ಇರಾನ್ ರಾಯಭಾರಿ ಮೊಹಮ್ಮದ್ ಫಥಾಲಿ ಅವರು ಭಾರತಕ್ಕೆ ಸುರಕ್ಷಿತ ಮಾರ್ಗದ ಬಗ್ಗೆ ಪಾಸಿಟಿವ್ ಹೇಳಿಕೆಗಳನ್ನು ನೀಡಿದ್ದರು. ಇದರ ಬೆನ್ನಲ್ಲೇ ಈ ದೊಡ್ಡ ಬೆಳವಣಿಗೆ ಸಂಭವಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !