Monday, November 17, 2025

ನೈಋತ್ಯ ರೈಲ್ವೆಯಿಂದ ಗುಡ್ ನ್ಯೂಸ್: ಬೆಂಗಳೂರು-ಬೀದರ್ ವಿಶೇಷ ಎಕ್ಸ್‌ಪ್ರೆಸ್ ಸೇವೆ ಮತ್ತಷ್ಟು ದಿನಗಳಿಗೆ ವಿಸ್ತರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಯಾಣಿಕರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಮತ್ತು ಹಬ್ಬದ ಸಂದರ್ಭದಲ್ಲಿ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ, ನೈಋತ್ಯ ರೈಲ್ವೆಯು ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಬೀದರ್ ನಡುವೆ ಸಂಚರಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಗಳ ಅವಧಿಯನ್ನು ವಿಸ್ತರಿಸಿದೆ.

ರೈಲು ಸಂಖ್ಯೆ 06539 ಬೆಂಗಳೂರಿನಿಂದ ಬೀದರ್‌ಗೆ ಪ್ರತಿ ಶುಕ್ರವಾರ ಮತ್ತು ಭಾನುವಾರದಂದು ಇದೇ 31ರವರೆಗೆ ಸಂಚರಿಸಲಿದೆ. ಈ ರೈಲು ಸೇವೆಯನ್ನು ನವೆಂಬರ್ 2 ರಿಂದ ಡಿಸೆಂಬರ್ 28 ರವರೆಗೆ ವಿಸ್ತರಿಸಲಾಗಿದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.

error: Content is protected !!