ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಾರಿಗೆ ಇಲಾಖೆಯಿಂದ ಗುಡ್ ನ್ಯೂಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಸಾರಿಗೆ ಇಲಾಖೆ ಗುಡ್ ನ್ಯೂಸ್ ನೀಡಿದ್ದು, ಕೆಎಸ್ ಆರ್ ಟಿಸಿ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿದೆ.
ಮಾರ್ಚ್​ 28ರಿಂದ 21-22ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಏಪ್ರಿಲ್​ 11ರವರೆಗೆ ನಡೆಯಲಿದ್ದು, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿದೆ.
ಪ್ರಯಾಣದ ಸಂದರ್ಭದಲ್ಲಿ ಪ್ರವೇಶ ಪತ್ರವನ್ನು ತೋರಿಸುವುದು ಕಡ್ಡಾಯವಾಗಿದೆ ಎಂದು ಕೆಎಸ್‌ಆರ್‌ಟಿಸಿ ಆಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪರೀಕ್ಷಾ ಕೇಂದ್ರಗಳಿಗೆ ಹೋಗುವಾಗ ಹಾಗೂ ಹಿಂತಿರುಗುವಾಗ ಕಡ್ಡಾಯವಾಗಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ. ಹೊರವಲಯ ಸಾಮಾನ್ಯ ಹಾಗೂ ವೇಗದೂತ ಬಸ್​ಗಳಲ್ಲು ಉಚಿತವಾಗಿ ಪ್ರಯಾಣಿಸಬಹುದು ಎಂದು ಕೆಎಸ್‌ಆರ್‌ಟಿಸಿ ಆಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!