17ವರ್ಷ ಮೇಲ್ಪಟ್ಟವರಿಗೆ ಚುನಾವಣಾ ಆಯೋಗದಿಂದ ಗುಡ್​ ನ್ಯೂಸ್: ಮತದಾನ ನೋಂದಣಿಗೆ ಹೊಸ ನಿಯಮ ಜಾರಿ​!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮತದಾನದಲ್ಲಿ ಯುವಕರು ಹೆಚ್ಚಿನ ಪಾಲ್ಗೊಳ್ಳುವಿಕೆಯನ್ನು ತ್ತೇಜಿಸಲು ಚುನಾವಣಾ ಆಯೋಗವು ಮತದಾನ ನೋಂದಣಿಗೆ ಹೊಸ ನಿಯಮವನ್ನು ಪರಿಚಯಿಸಿದೆ
17 ವರ್ಷಕ್ಕಿಂತ ಮೇಲ್ಪಟ್ಟ ಯುವಕರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಲು ಮುಂಚಿತವಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗಾಗಿ ಜನವರಿ 1, 2023ಕ್ಕೆ 18 ವರ್ಷ ಪೂರ್ಣಗೊಳ್ಳುವವರೆಗೆ ಕಾಯುವ ಅಗತ್ಯವಿಲ್ಲ ಎಂದು ಭಾರತದ ಚುನಾವಣಾ ಆಯೋಗ ತಿಳಿಸಿದೆ.
ಮುಖ್ಯ ಚುನಾವಣಾ ಆಯುಕ್ತ ಶ್ರೀ ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತ ಅನೂಪ್ ಚಂದ್ರ ಪಾಂಡೆ ನೇತೃತ್ವದ ಚುನಾವಣಾ ಆಯೋಗವು ಎಲ್ಲಾ ರಾಜ್ಯಗಳ ಸಿಇಒಗಳು/ಇಆರ್‌ಒಗಳು/ಎಇಆರ್‌ಒಗಳಿಗೆ ಈ ಕುರಿತು ಕಾರ್ಯಪ್ರವೃತ್ತವಾಗುವಂತೆ ನಿರ್ದೇಶಿಸಿದೆ. ಜೊತೆಗೆ, ಯುವ ಜನತೆ ತಮ್ಮ ಮುಂಗಡ ಅರ್ಜಿಗಳನ್ನು ಸಲ್ಲಿಸಲು ಅನುಕೂಲವಾಗುವಂತೆ ವ್ಯವಸ್ಥೆ ಕಲ್ಪಿಸಲು ಹಾಗೂ ಮಾಹಿತಿ ನೀಡಲು ಸೂಚಿಸಿದೆ.
ಇತ್ತೀಚಿನವರೆಗೂ, ನಿರ್ದಿಷ್ಟ ವರ್ಷದ ಜನವರಿ 1 ರಂದು ಅಥವಾ ಅದಕ್ಕಿಂತ ಮೊದಲು 18 ವರ್ಷ ತುಂಬಿದ ಜನರು ಮತದಾರರ ಪಟ್ಟಿಯಲ್ಲಿ ತಮ್ಮನ್ನು ತಾವು ನೋಂದಾಯಿಸಿಕೊಳ್ಳಲು ಅರ್ಹರಾಗಿದ್ದರು. ಜನವರಿ 1 ರ ನಂತರ 18 ವರ್ಷ ತುಂಬುವವರು ಮತದಾರರಾಗಿ ನೋಂದಾಯಿಸಲು ಒಂದು ವರ್ಷ ಪೂರ್ತಿ ಕಾಯಬೇಕಿತ್ತು. ಇದೀಗ ನಿಯಮದಲ್ಲಿ ಬದಲಾವಣೆ ಮಾಡಿದ್ದು, ಜನವರಿ 1, ಏಪ್ರಿಲ್ 1, ಜುಲೈ 1 ಮತ್ತು ಅಕ್ಟೋಬರ್ 1 ರಂದು 18 ನೇ ವರ್ಷಕ್ಕೆ ಕಾಲಿಟ್ಟ ಯುವಕ- ಯುವತಿಯರು ಮತದಾನಕ್ಕಾಗಿ ಅರ್ಜಿ ಸಲ್ಲಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!